ಲಖನೌ: ರಾಜಕೀಯ ಪಕ್ಷಗಳು ಜಾತಿ ಮತ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕಾಂಗ್ರೆಸ್ ಪಕ್ಷ ನವದೆಯಲಿಯಲ್ಲಿ ಹಮ್ಮಿಕೊಂಡಿದ್ದ ಜನವೇದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಪಕ್ಷದ ಚಿನ್ಹೆಯನ್ನು ಧಾರ್ಮಿಕ ಪ್ರವರ್ತಕರು ಹಾಗೂ ದೇವರ ಕೈಗೆ ಹೋಲಿಕೆ ಮಾಡಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯ ನಂದನ್ ಸಿಂಗ್ ನೇತೃತ್ವದ ನಿಯೋಗ ಲಖನೌ ನಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದೆ.
ಸುಪ್ರೀಂ ಕೋಟ್ ಆದೇಶವನ್ನು ಉಲ್ಲಂಘನೆ ಮಾಡುವುದರೊಂದಿಗೆ ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(3) ನ್ನೂ ಸಹ ರಾಹುಲ್ ಗಾಂಧಿ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.