ಸಂಗ್ರಹ ಚಿತ್ರ 
ದೇಶ

ಗಾಳಿಪಟ ಉತ್ಸವದ ವೇಳೆ ದೋಣಿ ಮಗುಚಿ ಮೃತಪಟ್ಟವರ ಸಂಖ್ಯೆ 24ಕ್ಕೇರಿಕೆ, ಹಲವರು ನಾಪತ್ತೆ

ಬಿಹಾರದ ಪಾಟ್ನಾದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಗಾಳಿಪಟ ಉತ್ಸವದ ವೇಳೆ ದೋಣಿ ಮಗುಚಿ ಬಿದ್ದು...

ಪಾಟ್ನಾ : ಬಿಹಾರದ ಪಾಟ್ನಾದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಗಾಳಿಪಟ ಉತ್ಸವದ ವೇಳೆ ದೋಣಿ ಮಗುಚಿ ಬಿದ್ದು ಮೃತಪಟ್ಟವರ ಸಂಖ್ಯೆ 24ಕ್ಕೇರಿದ್ದು, ಅನೇಕ ಮಂದಿ ನಾಪತ್ತೆಯಾಗಿದ್ದಾರೆ.


ಪಾಟ್ನಾದ ಗಂಗಾನದಿಯಲ್ಲಿ ಈ ದುರಂತ ಸಂಭವಿಸಿದೆ.ದೋಣಿಯಲ್ಲಿ 80 ಜನ ಇದ್ದರೆಂದು ಹೇಳಲಾಗಿದೆ. ಅದರಲ್ಲೆ 24 ಜನ ಸಾವನ್ನಪ್ಪಿದ್ದಾರೆ. ನಾಪತ್ತೆಯಾದವರ ಸಂಖ್ಯೆ ಇನ್ನೂ ನಿಖರವಾಗಿ ಸಿಕ್ಕಿಲ್ಲ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ರಾಜ್ಯ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಗಾಳಿ ಪಟ ಸ್ಪರ್ದೆಯಲ್ಲಿ ಜನಜಂಗುಳಿ ಹೆಚ್ಚಿದ ಪರಿಣಾಮ ಈ ದುಂರತ ಸಂಭವಿಸಿದೆ. ಉತ್ಸವದಲ್ಲಿ ಭಾಗವಹಿಸಲು ಹೆಚ್ಚಿನ ಜನ ಆಗಮಿಸಿದ್ದರು. ಆದರೆ ಅವರಿಗೆ ಅಗತ್ಯ ವಾದಷ್ಟು ಸಂಖ್ಯೆಯಲ್ಲಿ ದೋಣಿಗಳು ಇರಲಿಲ್ಲ, ದೋಣಿಯಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ತುಂಬಿದ್ದು ದುರಂತಕ್ಕೆ ಕಾರಣ ಎಂದು ಕೆಲ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ತಡರಾತ್ರಿಯವರೆಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿತ್ತು. ರಕ್ಷಣಾ ತಂಡ 8 ಜನರನ್ನು ಪಾರು ಮಾಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಣೆಯಾದವರಿಗಾಗಿ ಹುಡುಕಾಟ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ತನಿಖೆಗೆ ಆದೇಶಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಧನ ನೀಡುವಂತೆ ನಿತೀಶ್ ಕುಮಾರ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಉತ್ತರಪ್ರದೇಶದ ನಿಯಮದ ಪ್ರಕಾರ ದುರಂತದಲ್ಲಿ ಮೃತಪಟ್ಟರೆ ಅಂಥವರ ಕುಟುಂಬಕ್ಕೆ ನಾಲ್ಕು ಲಕ್ಷ ರೂ. ಪರಿಹಾರ ದೊರೆಯಲಿದೆ.

ದುರಂತ ನಡೆದು 45 ನಿಮಿಷಗಳ ನಂತರ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿತು. ಇದರಿಂದಾಗಿ ಸಾವಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ, ದೋಣಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ದುರಂತ ಸಂಭವಿಸಿದೆ ಎಂದು ಕೆಲ ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT