ಘಟನಾ ಸ್ಥಳದಲ್ಲಿ ಮೃತದೇಹಗಳನ್ನು ಸ್ಥಳಾಂತರಿಸುತ್ತಿರುವ ಎನ್'ಡಿಆರ್'ಎಫ್ ಪಡೆ 
ದೇಶ

ಗಂಗಾಸಾಗರದಲ್ಲಿ ಭಕ್ತರ ಸಾವಿಗೆ ಕಾಲ್ತುಳಿತ ಕಾರಣವಲ್ಲ: ಪಶ್ಚಿಮ ಬಂಗಾಳ ಸರ್ಕಾರ

ಗಂಗಾಸಾಗರದಲ್ಲಿ ಸಂಭವಿಸಿದ ದುರ್ಘಟನೆಗೆ ಕಾಲ್ತುಳಿತ ಕಾರಣವಲ್ಲ ಎಂದು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಸೋಮವಾರ ಹೇಳಿದೆ...

ಕೋಲ್ಕತಾ: ಗಂಗಾಸಾಗರದಲ್ಲಿ ಸಂಭವಿಸಿದ ದುರ್ಘಟನೆಗೆ ಕಾಲ್ತುಳಿತ ಕಾರಣವಲ್ಲ ಎಂದು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಸೋಮವಾರ ಹೇಳಿದೆ.

ನಿನ್ನೆಯಷ್ಟೇ ಗಂಗಾಸಾಗರದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ 6 ಮಂದಿ ಭಕ್ತರು ಸಾವನ್ನಪ್ಪಿದ್ದರು ಎಂದು ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಹೇಳಿಕೆ ನೀಡಿದ್ದರು. ಇದೀಗ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿದ್ದು, ದುರ್ಘಟನೆ ಸಂಭವಿಸಿದ್ದು, ಕಾಲ್ತುಳಿತದಿಂದ ಅಲ್ಲ ಎಂದು ಹೇಳಿಕೊಂಡಿದೆ.

ಘಟನೆ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಸುಂದರಬನ್ಸ್ ಅಭಿವೃದ್ಧಿ ಸಚಿವ ಮಂತುರಾಮ್ ಫಕೀರಾ ಅವರು, ಗಂಗಾಸಾಗರದಲ್ಲಿ ನಿನ್ನೆ ಸಾವನ್ನಪ್ಪಿದ್ದ 6 ಮಹಿಳೆಯರು ವೃದ್ಧೆಯರಾಗಿದ್ದು, ಕಾಲ್ತುಳಿತದಿಂದ ಅವರು ಸಾವನ್ನಪ್ಪಿರಲಿಲ್ಲ. ಬದಲಾಗಿ ಅನಾರೋಗ್ಯದಿಂದಾಗಿ ಅವರು ಸಾವನ್ನಪ್ಪಿದ್ದರು ಎಂದು ತಿಳಿಸಿದ್ದಾರೆ.

ನದಿಯಲ್ಲಿ ಪವಿತ್ರ ಸ್ನಾನ ಮಾಡಲೆಂದು ನಿನ್ನೆ ಲಕ್ಷಾಂತರ ಭಕ್ತರು ಗಂಗಾಸಾಗರದ ಬಳಿ ಸೇರಿದ್ದರು. ಈ ವೇಳೆ ಸ್ಥಳದಲ್ಲಿ ಜನರ ಸಂಖ್ಯೆ ಹೆಚ್ಚಾಗಿದ್ದರಿಂದ ಕೆಲವರು ಪ್ರಜ್ಞೆ ತಪ್ಪಿದ್ದರು. ಅನಾರೋಗ್ಯಪೀಡತರಾಗಿದ್ದ 6 ಮಹಿಳೆಯರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ವಯಸ್ಸಾದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು ಎಂದು ಅವರು ಹೇಳಿದ್ದಾರೆ.

ಸಾವನ್ನಪ್ಪಿದ್ದ ಮಹಿಳೆಯರಿಗೆ 75 ವರ್ಷಕ್ಕೂ ಹೆಚ್ಚು ವಯಸ್ಸಾಗಿತ್ತು. ಅಲ್ಲದೆ, ದುರ್ಬಲಗೊಂಡಿದ್ದರು. ಹೀಗಾಗಿ ಸಹಜವಾಗಿಯೇ ಸಾವನ್ನಪ್ಪಿದ್ದರು. ಮಹಿಳೆಯರು ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ವೈದ್ಯರೂ ಕೂಡ ಹೇಳಿಕೆ ನೀಡಿದ್ದಾರೆ. ಇನ್ನು ನೀರಿನ ಹರಿವು ಕಡಿಮೆಯಿದ್ದರಿಂದಾಗಿ ದೋಣಿಗಳು ಕೂಡ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. 8 ಗಂಟೆಗಳ ಕಾಲ ದೋಣಿಗಳು ಕಾರ್ಯನಿರ್ವಹಿಸಿರಲಿಲ್ಲ ಎಂದು ಫಕೀರಾ ಅವರು ತಿಳಿಸಿದ್ದಾರೆ.

ಘಟನೆಗೆ ಕಾಲ್ತುಳಿತವೇ ಕಾರಣ ಎಂಬುದನ್ನು ರಾಜ್ಯ ಸಚಿವರಾದ ಸುಬ್ರತಾ ಮುಖರ್ಜಿ ಹಾಗೂ ಅರೂಪ್ ಬಿಸ್ವಾಲ್ ಕೂಡ ತಿರಸ್ಕರಿಸಿದ್ದಾರೆ.

ರಾಜಧಾನಿ ಕೋಲ್ಕತಾದಿಂದ ಸುಮಾರು 129 ಕಿ.ಮೀ ದೂರದಲ್ಲಿರುವ ಕಪಿಲ ಮುನಿ ಆಶ್ರಮದ ಆವರಣದಲ್ಲಿನ ಗಂಗಾನದಿ ದಡದಲ್ಲಿ ನಿನ್ನೆ ಕಾಲ್ತುಳಿತ ಸಂಭವಿಸಿತ್ತು. ಮಕರ ಸಂಕ್ರಾಂತಿ ನಿಮಿತ್ತ ನಿನ್ನೆ ಲಕ್ಷಾಂತರ ಭಕ್ತರು ನದಿಯಲ್ಲಿ  ಪವಿತ್ರ ಸ್ನಾನ ಮಾಡುತ್ತಿದ್ದ ವೇಳೆ ಕಾಲ್ತುಳಿತ ಸಂಭವಿಸಿ 6 ಮಂದಿ ಸಾವನ್ನಪ್ಪಿದ್ದರು ಎಂದು ನಿನ್ನೆಯಷ್ಟೇ ಅಲ್ಲಿನ ಜಿಲ್ಲಾಧಿಕಾರಿಗಳು ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT