ನವದೆಹಲಿ: 42 ಪೈಸೆ ಹಾಗೂ ಡೀಸೆಲ್ ಬೆಲೆ 1.03 ಪೈಸೆ ಹೆಚ್ಚಳವಾಗಿದೆ. ಏರಿಕೆ ನಂತರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 71 ರೂಪಾಯಿ 02 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 58 ರೂಪಾಯಿ 85 ಪೈಸೆಯಷ್ಟಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ವರ್ಧನೆಯಿಂದ ಅದರ ಹೊರೆ ಗ್ರಾಹಕರ ಮೇಲೆ ಬಿದ್ದಿದೆ.
ಇದೇ ತಿಂಗಳು 2ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿತ್ತು. ಪೆಟ್ರೋಲ್ ಗೆ 1 ರೂಪಾಯಿ 29 ಪೈಸೆ ಮತ್ತು ಡೀಸೆಲ್ ಗೆ 97 ಪೈಸೆ ಹೆಚ್ಚಳವಾಗಿತ್ತು. ಇದೀಗ ಒಂದೇ ತಿಂಗಳಲ್ಲಿ ಎರಡನೇ ಸಲ ಕಚ್ಚಾ ತೈಲ ಬೆಲೆ ಹೆಚ್ಚಳವಾಗಿದೆ.