ದೇಶ

ಎಸ್'ಪಿ, ಕಾಂಗ್ರೆಸ್ ಮೈತ್ರಿಗೊಂಡರೆ, ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನದಿಂದ ಕೆಳಗಿಳಿಯುವೆ: ಶೀಲಾ ದೀಕ್ಷಿತ್

Manjula VN

ನವದೆಹಲಿ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ವೇಳೆ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿಗೊಂಡಿದ್ದೇ ಆದರೆ, ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನದಿಂದ ಕೆಳಗಿಳಿಯುತ್ತೇನೆಂದು ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರು ಮಂಗಳವಾರ ಹೇಳಿದ್ದಾರೆ.

ಇನ್ನು ಕೆಲವೇ ದಿನಗಳಲ್ಲು ಉತ್ತರಪ್ರದೇಶದಲ್ಲಿ ಚುನಾವಣೆ ಆರಂಭಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿಗೊಳ್ಳಲಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆಯೇ ಶೀಘ್ರದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಹೇಳಿಕೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರೂ ಕೂಡ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಶೀಲಾ ದೀಕ್ಷಿತ್ ಅವರು, ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿಗೊಂಡಲೆ ಉತ್ತರಪ್ರದೇಶ ರಾಜ್ಯಕ್ಕೆ ಲಾಭವಾಗುತ್ತದೆ ಎಂಬ ಮಾತುಗಳು ಕೇಳಿಬುರುತ್ತಿವೆ. ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಇಬ್ಬರು ಕಣಕ್ಕಿಳಿಯಲು ಸಾಧ್ಯವಿಲ್ಲ. ಹೀಗಾಗಿ ಒಂದು ವೇಳೆ ಮೈತ್ರಿಗೊಂಡಿದ್ದೇ ಆದರೆ, ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನದಿಂದ ನಾನು ಕೆಳಗಿಳಿಯುತ್ತೇನೆ. ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದರಂತೆ ನಾನು ಮುನ್ನಡೆಯುತ್ತೇನೆಂದು ತಿಳಿಸಿದ್ದಾರೆ.

SCROLL FOR NEXT