ಗಂಗಾ ನದಿ (ಸಂಗ್ರಹ ಚಿತ್ರ) 
ದೇಶ

ಗಂಗಾ ನದಿ ಸ್ವಚ್ಛತಾ ಅಭಿಯಾನಕ್ಕೆ ಯುವಕರ ಸಹಾಯ ಪಡೆಯಲು ಮುಂದಾದ ಕೇಂದ್ರ

: ನಮಾಮಿ ಗಂಗಾ ಯೋಜನೆಯಡಿ ಗಂಗಾನದಿ ಸ್ವಚ್ಛತೆ ಬಗ್ಗೆ ಸ್ಥಳೀಯ ನಿವಾಸಿಗಳು ಮತ್ತು ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಲು ಸಾವಿರಾರು ಮಂದಿ ...

ನವದೆಹಲಿ: ನಮಾಮಿ ಗಂಗಾ ಯೋಜನೆಯಡಿ ಗಂಗಾನದಿ ಸ್ವಚ್ಛತೆ ಬಗ್ಗೆ ಸ್ಥಳೀಯ ನಿವಾಸಿಗಳು ಮತ್ತು ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಲು ಸಾವಿರಾರು ಮಂದಿ ಯುವಕರನ್ನು ಸ್ವಯಂ ಸೇವಕರನ್ನಾಗಿ ನದಿ ದಡದಲ್ಲಿರುವ ಹಳ್ಳಿಗಳಿಗೆ ನಿಯೋಜಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಗಂಗಾ ನದಿ ಶುದ್ದೀಕರಣದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಆ ಮೂಲಕ ಜೀವನದಿಯಾದ ಗಂಗೆಯನ್ನು ರಕ್ಷಿಸಲು ಕೇಂದ್ರ ಸರ್ಕಾರ ನಮಾಮಿ ಗಂಗೆ ಎಂಬ ಯೋಜನೆ ಜಾರಿ ಮಾಡಿದೆ. ಈ ಯೋಜನೆಗೆ ಸರ್ಕಾರ 10 ಕೋಟಿ ರು. ವೆಚ್ಚ ಮಾಡಲು ನಿರ್ಧರಿಸಿದೆ. ಕೈಗಾರಿಕೆಗಳ ತ್ಯಾಜ್ಯಗಳು ನದಿ ಸೇರುತ್ತಿರುವುದರಿಂದ ನೀರು ಮಲಿನಗೊಳ್ಳುತ್ತಿದೆ.ನದಿ ಶುದ್ದೀಕರಣಕ್ಕಾಗಿ ಉತ್ಸಾಹಿ ಯುವಕರನ್ನು ಬಳಸಿಕೊಂಡು ಗಂಗಾ ನದಿ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲು ಕೇಂದ್ರ ಮುಂದಾಗಿದೆ.

ಕೇಂದ್ರ ಯುವಜನ ಮತ್ತು ಕ್ರೀಡಾ ಇಲಾಖೆ ಅಡಿ ಬರುವ ನೆಹರು ಯುವ ಕೇಂದ್ರ ಸಂಘಥಾನ್ ಗಂಗಾನದಿ ದಡದಲ್ಲಿರುವ ರಾಜ್ಯಗಳಿಂದ ಸುಮಾರು 20 ಸಾವಿರಕ್ಕೂ ಹೆಚ್ಚು ಯುವಕರನ್ನು ನಮಾಮಿ ಗಂಗೆ ಯೋಜನೆಯನ್ನು ಪ್ರತಿನಿಧಿಸುವ ಸ್ವಚ್ಛತಾ ಧೂತರನ್ನಾಗಿ ನೇಮಿಸಲು ಸಿದ್ಧತೆ ನಡೆಸಿದೆ.

ಈ ಎಲ್ಲಾ 20 ಸಾವಿರ ಯುವಕರಿಗೆ ಒಂದು ವಾರಗಳ ಕಾಲ ತರಬೇತಿ ನೀಡಿ, ಯುವಕರ ಮೂಲಕ ಗಂಗಾ ನದಿ ಸ್ವಚ್ಛತೆಯ ಬಗ್ಗೆ ಜನರಿಗೆ ಸಂದೇಶ ಕೊಡಿಸಲು ತಯಾರಿ ನಡೆಸಲಾಗುತ್ತಿದೆ.

ಈ ಯುವಕರು ಗಂಗಾ ನದಿ ಸ್ವಚ್ಛತೆ ಬಗ್ಗೆ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಮಾಹಿತಿ ನೀಡುವುದರ ಜೊತೆಗೆ ಗಂಗಾನದಿ ಪಾವಿತ್ರ್ಯತೆ ಕಾಪಾಡಾಲು ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಶೌಚಾಲಯಗಳ ನಿರ್ಮಾಣ, ನೀರು ಕೊಯ್ಲು ಮತ್ತು ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡಿರುವ ಹಲವು ಚಟುವಟಿಕೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಿದ್ದಾರೆ.

ಗಂಗಾ ಜಲಾನಯನ ಪ್ರದೇಶದಲ್ಲಿರುವ 29 ಜಿಲ್ಲೆಗಳ 2,336 ಗ್ರಾಮಗಳ ಯುವಜನರನ್ನು ನಮಾಮಿ ಗಂಗೆ ಯೋಜನೆಗೆ ನಿಯೋಜಿಸಲಾಗುತ್ತದೆ. ಗಂಗಾಜಲಾನಯನ ಪ್ರದೇಶ ರಾಜ್ಯಗಳಾದ ಉತ್ತರಾಖಂಡ್, ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಎಲ್ಲಾ ಜಿಲ್ಲೆಗಳಿಗೆ ತಲಾ ಒಬ್ಬೊಬ್ಬ ಯೋಜನಾ ಅಧಿಕಾರಿಯನ್ನು ನೇಮಿಸಲಾಗುವುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ