ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದ್ದು ಒಂದೆರಡು ದಿನಗಳಲ್ಲಿ ಬಿಜೆಪಿ ಸೇರುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಇತ್ತೀಚಿನ ವರದಿಗಳ ಪ್ರಕಾರ ಕುಮಾರ್ ವಿಶ್ವಾಸ್ ಅವರನ್ನು ಉತ್ತರ ಪ್ರದೇಶ ಚುನಾವಣೆಗೆ ಅಭ್ಯರ್ಥಿಯನ್ನಾಗಿಸುವುದಕ್ಕೆ ಬಿಜೆಪಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಕುಮಾರ್ ವಿಶ್ವಾಸ್ ಅವರ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕರು, ಕುಮಾರ್ ವಿಶ್ವಾಸ್ ಅವರೊಂದಿಗಿನ ಮಾತುಕತೆ ಅಂತಿಮ ಹಂತದಲ್ಲಿದೆ. ಹೆಚ್ಚು ಸಮಯ ತೆಗೆದುಕೊಳ್ಳದೇ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಅಧಿಕೃತ ಘೋಷಣೆಗೂ ಮುನ್ನ ಕುಮಾರ್ ವಿಶ್ವಾಸ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಕಾಂಗ್ರೆಸ್ ನ ರಾಹುಲ್ ಗಾಂಧಿ ಹಾಗೂ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸಿದ್ದ ಕುಮಾರ್ ವಿಶ್ವಾಸ್ ಈಗ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗಾಜಿಯಾಬಾದ್ ಜಿಲ್ಲೆಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾಗಿರುವ ಪಂಕಜ್ ಸಿಂಗ್ ಸಹ ಇದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂಬ ವದಂತಿಯೂ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics