ಅಖಿಲೇಶ್ ಯಾದವ್ 
ದೇಶ

ಮೈತ್ರಿ ಬಗ್ಗೆ ಕಾಂಗ್ರೆಸ್ ನಿಂದ ಸಕಾರಾತ್ಮಕ ಸ್ಪಂದನೆ ಇಲ್ಲ: ಸಮಾಜವಾದಿ ಪಕ್ಷ

ನಿನ್ನೆಯಷ್ಟೆ ರಾಷ್ಟ್ರೀಯ ಲೋಕ ದಳದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದ ಸಮಾಜವಾದಿ ಪಕ್ಷ, ಇದೀಗ ಮೈತ್ರಿಗೆ...

ಲಖನೌ: ನಿನ್ನೆಯಷ್ಟೆ ರಾಷ್ಟ್ರೀಯ ಲೋಕ ದಳದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದ ಸಮಾಜವಾದಿ ಪಕ್ಷ, ಇದೀಗ ಮೈತ್ರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಬಂದಿಲ್ಲ ಎಂದು ಶುಕ್ರವಾರ ಹೇಳಿದೆ.
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದು ನಮ್ಮ ಉದ್ದೇಶ. ಹೀಗಾಗಿ ಕಾಂಗ್ರೆಸ್ ಸಮಾಜವಾದಿ ಪಕ್ಷದ ಸೀಟು ಹಂಚಿಕೆ ಸೂತ್ರವನ್ನು ಒಪ್ಪಿಕೊಳ್ಳಬೇಕು ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಿರಣ್ಮೊಯಿ ನಂದಾ ಅವರು ಹೇಳಿದ್ದಾರೆ.
ಸಮಾಜವಾದಿ ಪಕ್ಷದ 191 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಂದಾ ಅವರು, ನಾವು ಕಾಂಗ್ರೆಸ್ ಗೆ 54 ಸ್ಥಾನಗಳನ್ನು ಮುಂದಿಟ್ಟಿದ್ದು, ಇನ್ನೂ 25ರಿಂದ 30 ಸ್ಥಾನಗಳನ್ನು ಕೊಡಲು ಬಯಸಿದ್ದೆವು. ಆದರೆ ನಮಗೆ ಈವರೆಗೂ ಕಾಂಗ್ರೆಸ್ ಪಕ್ಷದಿಂದ ಯಾವುದೇ ಸ್ಪಂದನೆ ಬಂದಿಲ್ಲ. ಮಾತುಕತೆಯ ಮೇಜಿಗೆ ಈಗ ಕಾಂಗ್ರೆಸ್ ಬರುತ್ತಿಲ್ಲ ಎಂದು ನಂದಾ ಆರೋಪಿಸಿದ್ದಾರೆ. 
ಇನ್ನು ನಂದಾ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದಿರುವ ಸಮಾಜವಾದಿ ಪಕ್ಷದ ಸಂಸದ ನರೇಶ ಅಗರ್​ವಾಲ್ ಅವರು, ಮೈತ್ರಿ ಬಗ್ಗೆ ಎಸ್​ಪಿ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ ಯಾದವ್ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ಕರ್ನಾಟಕದ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

Dhurandhar 2 ಆರ್ಭಟಕ್ಕೆ ಬೆದರಿದ ಮತ್ತೊಂದು ಸಿನಿಮಾ; 'ಡಕಾಯಿತ್' ಬಿಡುಗಡೆ ಮುಂದೂಡಿಕೆ

CM ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ; FIR ದಾಖಲಿಸುವಂತೆ ಸುರ್ಜೇವಾಲ ಆಗ್ರಹ

SCROLL FOR NEXT