ಬಿಜೆಪಿ 
ದೇಶ

ಕೊಲೆ ಪ್ರಕರಣ: ಬಿಜೆಪಿ ವಕ್ತಾರನ ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಮತ್ತು ಪ್ರಸ್ತುತ ಬಿಜೆಪಿ ವಕ್ತಾರ ಎನ್ ಬೈರೆನ್ ಸಿಂಗ್ ಪುತ್ರ ಅಜಯ್ ಗೆ ಐದು ವರ್ಷ ಜೈಲು ಶಿಕ್ಷೆಗೆ...

ಇಂಪಾಲ್(ಮಣಿಪುರ): ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಮತ್ತು ಪ್ರಸ್ತುತ ಬಿಜೆಪಿ ವಕ್ತಾರ ಎನ್ ಬೈರೆನ್ ಸಿಂಗ್ ಪುತ್ರ ಅಜಯ್ ಗೆ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಆರು ವರ್ಷಗಳ ಹಳೆ ಕೊಲೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶರಾದ ಎಂ ಮನೋಜ್ ಕುಮಾರ್ ಸಿಂಗ್ ಅವರು ಆರೋಪಿ ಅಜಯ್ ಗೆ ಐದು ವರ್ಷ ಕಾಲ ಜೈಲು ಶಿಕ್ಷೆ ವಿಧಿಸಿದ್ದಾರೆ. ಜತೆಗೆ ಮೃತ ಇಮಾರ್ ರೋಗರ್ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವಂತೆ ಅಜಯ್ ಮತ್ತು ಆತನ ಕುಟುಂಸ್ಥರಿಗೆ ಸೂಚಿಸಿದ್ದಾರೆ.

ವಿಚಾರಣೆ ವೇಳೆ ಮೃತ ಇರಾಮ್ ರೋಗರ್ ತಾಯಿ ಚಿತ್ರ ಸಹ ಕೋರ್ಟ್ ಹಾಲ್ ನಲ್ಲಿ ಹಾಜರಿದ್ದರು. ಆರೋಪಿ ಅಜಯ್ ಗೆ ಐದು ವರ್ಷ ಕಾಲ ಜೈಲು ಶಿಕ್ಷೆ ವಿಧಿಸುತ್ತಿದ್ದಂತೆ ಆಕೆ ಹರ್ಷ ವ್ಯಕ್ತಪಡಿಸಿದರು.

2011ರ ಮಾರ್ಚ್ 20ರಂದು ಮಣಿಪುರದಲ್ಲಿ ನಡೆದ ಯಾಹೊಶಾಂಗ್ ಉತ್ಸವದ ವೇಳೆ ಅಜಯ್ ಇರಾಮ್ ರೋಗೆರ್ ಎಂಬುವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು. ಈ ಪ್ರಕರಣ ಸಂಬಂಧ ಅಜಯ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದಿಂದ ನಾಲ್ವರನ್ನು ಕೈಬಿಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!