ಲಕ್ನೋ: ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಇದೇ ಮೊದಲ ಬಾರಿಗೆ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಮಾಜವಾದಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತಮ್ಮ ಮಗನ ಭವಿಷ್ಯಕ್ಕಾಗಿ ಸಹೋದರ ಶಿವಪಾಲ್ ಯಾದವ್ ರನ್ನು ಬಲಿಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಯಾವತಿ, ಇತ್ತೀಚಿಗೆ ನಡೆದ ಕುಟುಂಬ ಕಲಹ ಮುಲಾಯಂ ಹೆಣೆದ ಪೂರ್ವ ನಿಯೋಜಿತ ಡ್ರಾಮಾ ಎಂದು ಟೀಕಿಸಿದ್ದಾರೆ. ಉತ್ತರ ಪ್ರದೇಶದ ಜನತೆಗೆ ಅಖಿಲೇಶ್ ಯಾದವ್ರನ್ನು ತಿರಸ್ಕರಿಸಲಿದ್ದಾರೆ. ಅಖಿಲೇಶ್ ಆಡಳಿತ ಸಂಪೂರ್ಣ ವಿಫಲಗೊಂಡಿದೆ ಎಂದಿದ್ದಾರೆ.
ಎಸ್ಪಿ ಮತ್ತು ಕಾಂಗ್ರೆಸ್ ಮೈತ್ರಿಯನ್ನು ಟೀಕಿಸಿರುವ ಮಾಯಾವತಿ, ರಥ ಯಾತ್ರೆ ಮತ್ತು ಕಾಟ್ ಪೆ ಚರ್ಚಾ ಕಾರ್ಯಕ್ರಮಗಳನ್ನು ಮಾಡಿದ್ದ ರಾಹುಲ್ ಗಾಂಧಿ ಇದೀಗ ಎಸ್ಪಿ ಜತೆಗೆ ಮೈತ್ರಿಗೆ ಮುಂದಾಗಿದ್ದಾರೆ. ತನ್ನ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲೇ ಅಭ್ಯರ್ಥಿಗಳನ್ನು ಇಳಿಸಲು ಕಾಂಗ್ರೆಸ್ಗೆ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.