ಸಾಂದರ್ಭಿಕ ಚಿತ್ರ 
ದೇಶ

ಮೆಘಾಲಯ: 11 ವರ್ಷದ ಬಾಲಕಿ ಮೇಲೆ 7 ಅಪ್ರಾಪ್ತರಿಂದ ಕನಿಷ್ಠ ಎರಡು ಬಾರಿ ಗ್ಯಾಂಗ್ ರೇಪ್

11 ವರ್ಷದ ಬಾಲಕಿ ಮೇಲೆ ಏಳು ಅಪ್ರಾಪ್ತ ಬಾಲಕರು ಕನಿಷ್ಠ ಎರಡು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನೈಋತ್ಯ ಕಾಶಿ ಹಿಲ್ಸ್...

ಶಿಲಾಂಗ್: 11 ವರ್ಷದ ಬಾಲಕಿ ಮೇಲೆ ಏಳು ಅಪ್ರಾಪ್ತ ಬಾಲಕರು ಕನಿಷ್ಠ ಎರಡು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನೈಋತ್ಯ ಕಾಶಿ ಹಿಲ್ಸ್ ಜಿಲ್ಲೆಯ ಮಾವ್ಟೆನ್ ಗ್ರಾಮದಲ್ಲಿ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ ಮೊದಲ ಬಾರಿ ಬತ್ತದ ಗದ್ದೆಯಲ್ಲಿ ಹಾಗೂ ಜನವರಿ 13ರಂದು ಮನೆಯಲ್ಲಿ ಎರಡನೇ ಬಾರಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಅದೇ ಗ್ರಾಮದ ಆರು ಬಾಲಕರನ್ನು ಬಂಧಿಸಿದ್ದು, ಅವರೆಲ್ಲರೂ 14ರಿಂದ 16 ವರ್ಷದೊಳಗಿನವರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಆರೋಪಿಗಳು ತಪ್ಪೊಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT