ಸೋನಿಯಾ ಗಾಂಧಿ 
ದೇಶ

ಎಸ್ ಪಿ-ಕಾಂಗ್ರೆಸ್ ಸೀಟು ಹಂಚಿಕೆ ಮಾತುಕತೆಗೆ ಸೋನಿಯಾ ಗಾಂಧಿ ಪ್ರವೇಶ

ಉತ್ತರ ಪ್ರದೇಶದ ವಿಧಾನಸಭ ಚುನಾವಣೆಯ ಸೀಟು ಹಂಚಿಕೆ ವಿಷಯದಲ್ಲಿ ಸಮಾಜವಾದಿ ಪಕ್ಷ- ಕಾಂಗ್ರೆಸ್ ಪಕ್ಷದ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಕ್ಕಟ್ಟು ನಿವಾರಣೆಯ ಜವಾಬ್ದಾರಿಯನ್ನು ಸೋನಿಯಾ ಗಾಂಧಿ ವಹಿಸಿಕೊಂಡಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ವಿಧಾನಸಭ ಚುನಾವಣೆಯ ಸೀಟು ಹಂಚಿಕೆ ವಿಷಯದಲ್ಲಿ ಸಮಾಜವಾದಿ ಪಕ್ಷ- ಕಾಂಗ್ರೆಸ್ ಪಕ್ಷದ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಕ್ಕಟ್ಟು ನಿವಾರಣೆಯ ಜವಾಬ್ದಾರಿಯನ್ನು ಸೋನಿಯಾ ಗಾಂಧಿ ವಹಿಸಿಕೊಂಡಿದ್ದಾರೆ. 
ಅಖಿಲೇಶ್ ಯಾದವ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಸೋನಿಯಾ ಗಾಂಧಿ, ಸೀಟು ಹಂಚಿಕೆ ಬಗ್ಗೆ ಚರ್ಚಿಸಿದ್ದಾರೆ. ಪರಿಣಾಮವಾಗಿ ಕಾಂಗ್ರೆಸ್ ನಾಯಕರಲ್ಲಿ ಉತ್ಸಾಹ ಮೂಡಿದೆ. ಸಮಾಜವಾದಿ ಪಕ್ಷ  ಕಾಂಗ್ರೆಸ್ ನೊಂದಿಗೆ 100 ವಿಧಾನಸಭಾ ಕ್ಷೇತ್ರಗಳಲ್ಲಿ ಹೊಂದಾಣಿ ಮಾಡಿಕೊಳ್ಳಲು ಮುಂದಾಗಿದೆ. ಆದರೆ ಕಾಂಗ್ರೆಸ್ ಪಕ್ಷ 120 ಕ್ಷೇತ್ರಗಳಲ್ಲಿ ಸೀಟು ಹಂಚಿಕೆಯಾಗಬೇಕು ಎಂದು ಪಟ್ಟು ಹಿಡಿದಿರುವುದು ಮೈತ್ರಿಯಲ್ಲಿ ಬಿರುಕು ಮೂಡಲು ಕಾರಣವಾಗಿತ್ತು. 
ಆದರೆ ಈಗ ಸೋನಿಯಾ ಗಾಂಧಿ ಮಾತುಕತೆಗೆ ಮುಂದಾಗಿದ್ದು, ಎಐಸಿಸಿ ಅಧ್ಯಕ್ಷರ ಮಧ್ಯಸ್ಥಿಕೆಯಿಂದ ಕಾಂಗ್ರೆಸ್-ಎಸ್ ಪಿ ಮೈತ್ರಿಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ಕಾಂಗ್ರೆಸ್ ನ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಚುನಾವಣೆಯಲ್ಲಿ ಉಭಯ ಪಕ್ಷಗಳಿಗೂ ಪರಸ್ಪರರ ಅಗತ್ಯತೆ ಇದೆ, ಶೀಘ್ರವೇ ಎಲ್ಲವೂ ನಿರ್ಧಾರವಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!