ಸಾಂದರ್ಭಿಕ ಚಿತ್ರ 
ದೇಶ

ಎಸ್ಪಿ, ಕಾಂಗ್ರೆಸ್ ಮೈತ್ರಿ ಉದಾಹರಣೆಯನ್ನು ಸೃಷ್ಟಿಸಲಿದೆ: ಕಾಂಗ್ರೆಸ್ ನಾಯಕ ರಾಜ್ ಬಬ್ಬರ್

ಸೀಟು ಹಂಚಿಕೆ ವಿಷಯದಲ್ಲಿ ತಮ್ಮ ಭಿನ್ನಾಭಿಪ್ರಾಯಗಳನ್ನೆಲ್ಲಾ ಬದಿಗೊತ್ತಿ ಒಂದಾಗಿರುವ ಸಮಾಜವಾದಿ...

ಲಕ್ನೋ: ಸೀಟು ಹಂಚಿಕೆ ವಿಷಯದಲ್ಲಿ ತಮ್ಮ ಭಿನ್ನಾಭಿಪ್ರಾಯಗಳನ್ನೆಲ್ಲಾ ಬದಿಗೊತ್ತಿ ಒಂದಾಗಿರುವ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಇಂದು ಉತ್ತರ ಪ್ರದೇಶ ಚುನಾವಣೆ ಸಂಬಂಧ ಸೀಟು ಹಂಚಿಕೆ ಮಾಡಿಕೊಂಡಿದೆ.
ಇಂದು ಲಕ್ನೋದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಉತ್ತರ ಪ್ರದೇಶ ಮುಖ್ಯಸ್ಥ ರಾಜ್ ಬಬ್ಬರ್ ಮತ್ತು ಸಮಾಜವಾದಿ ಮುಖಂಡ ನರೇಶ್ ಉತ್ತಮ್ ಪಟೇಲ್ ಮಾತನಾಡಿದರು. ಆಡಳಿತಾರೂಢ ಸಮಾಜವಾದಿ ಪಕ್ಷ ಕಾಂಗ್ರೆಸ್ ಗೆ  105 ಸೀಟುಗಳನ್ನು ಬಿಟ್ಟುಕೊಡಲು ತೀರ್ಮಾನಿಸಿದೆ ಮತ್ತು ಉಳಿದ ಸೀಟುಗಳು ಎಸ್ ಪಿಗೆ ಮೀಸಲಾಗಿವೆ. 
ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಮಾಜವಾದಿ ಪಕ್ಷದ ಮುಖಂಡ ಉತ್ತಮ್ ಪಟೇಲ್, ಈ ಬಾರಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಜಂಟಿಯಾಗಿ ಚುನಾವಣೆಯನ್ನು ಎದುರಿಸಲಿದ್ದು, ಎಲ್ಲಾ 403 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಸಮಾಜವಾದಿ ಪಕ್ಷ 298 ಕ್ಷೇತ್ರಗಳಲ್ಲಿ ತನ್ನ ಸ್ಪರ್ಧಿಗಳನ್ನು ಕಣಕ್ಕಿಳಿಸಲಿದೆ.
ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ರಾಜ್ಯದ ಜನರ ಒಳಿತಿಗೆ ಇನ್ನಷ್ಟು ಕೆಲಸ ಮಾಡಲು ಸಹಾಯವಾಗಲಿದ್ದು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ರಾಜ್ ಬಬ್ಬರ್ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್, ಸಮಾಜವಾದಿ ಪಕ್ಷಗಳ ನಡುವಣ ಮೈತ್ರಿ ಒಂದು ಉದಾಹರಣೆಯನ್ನು ಸೃಷ್ಟಿಸಲಿದೆ. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡಲು ಮತ್ತು ರಾಜ್ಯದ ಜನರ ಏಳಿಗೆಗೆ ಶ್ರಮಿಸಲು ಸಹಾಯವಾಗಲಿದೆ ಎಂದು ಅವರು ಹೇಳಿದರು.
ಇನ್ನೊಂದು ವಾರದೊಳಗೆ ಸಾಮಾನ್ಯ ಕನಿಷ್ಟ ಕಾರ್ಯಕ್ರಮವನ್ನು ರಚಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!