ದೇಶ

ಬೇರೆ ಪಕ್ಷಗಳಿಂದ ಲಂಚ ಪಡೆಯುವ ಹೇಳಿಕೆ ಪುನರುಚ್ಛರಿಸಲು ಚು.ಆಯೋಗದ ಅನುಮತಿ ಕೇಳಿದ ಕೇಜ್ರಿವಾಲ್

ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳಿಂದ ಲಂಚ ಪಡೆದು, ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಎಂಬ ಹೇಳಿಕೆಯನ್ನು ಪುನರುಚ್ಛರಿಸಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ಮನವಿ...

ನವದೆಹಲಿ: ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳಿಂದ ಲಂಚ ಪಡೆದು, ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಎಂಬ ಹೇಳಿಕೆಯನ್ನು ಪುನರುಚ್ಛರಿಸಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. 
ಗೋವಾ ಮತದಾರರು ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಹಣ ಪಡೆದುಕೊಂಡು ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿರುವ ಹೇಳಿಕೆಗೆ ಚುನಾವಣಾ ಆಯೋಗ ಛೀಮಾರಿ ಹಾಕಿತ್ತು. ಆದರೆ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಹೇಳಿಕೆಯ ವಿರುದ್ಧ ಚುನಾವಣಾ ಆಯೋಗದ ಆದೇಶ ಚುನಾವಣೆಯಲ್ಲಿ ನಡೆಯುವ ಭ್ರಷ್ಟಾಚಾರವನ್ನು ಉತ್ತೇಜಿಸುತ್ತಿದೆ ಎಂದಿದ್ದು, ಈ ರೀತಿಯ ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕಬೇಕಾದರೆ ತಮ್ಮನ್ನು ರಾಯಭಾರಿಯನ್ನಾಗಿ ಮಾಡಬೇಕೆಂದು ಕೇಜ್ರಿವಾಲ್ ಹೇಳಿದ್ದಾರೆ. 
ನನ್ನನ್ನು ತಡೆಯುವ ಮೂಲಕ ಚುನಾವಣಾ ಆಯೋಗ ಭ್ರಷ್ಟಾಚಾರವನ್ನು ತಡೆಯುತ್ತಿಲ್ಲ. ಬದಲಾಗಿ ಮತ್ತಷ್ಟು ಉತ್ತೇಜಿಸುತ್ತಿದೆ, ಚುನಾವಣಾ ಆಯೋಗ ಆದೇಶವನ್ನು ಮರುಪರಿಶೀಲನೆ ಮಾಡಿ ಅಂತಹದ್ದೇ ಹೇಳಿಕೆಗಳನ್ನು ನೀಡಲು ಅವಕಾಶ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೈವಾಹಿಕ ಕಲಹ: ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಮಂದಿಯನ್ನು ಭೀಕರ ಹತ್ಯೆ ಮಾಡಿದ ಕ್ಯಾಬ್ ಚಾಲಕ !

ಅಮೆರಿಕಕ್ಕೆ ಬಿಗ್ ಶಾಕ್; ಪರಮಾಣು ಸ್ಥಾವರಗಳ ಮೇಲಿನ ದಾಳಿಗೆ ಖಂಡನೆ, ಇರಾನ್ ಪರ ನಿಂತ ರಷ್ಯಾ; ಯುದ್ಧ ನಿಲ್ಲಿಸಲು ಸರ್ವಪ್ರಯತ್ನ ಎಂದ ಪುಟಿನ್..!

ಅಮೆರಿಕ ಚುನಾವಣೆಯಲ್ಲಿ ಹಿನ್ನಡೆ ಬೆನ್ನಲ್ಲೇ ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; ಯುದ್ಧ ಮತ್ತಷ್ಟು ಭೀಕರಗೊಳಿಸುವ ಸುಳಿವು, ಇಡೀ ದೇಶವನ್ನೇ ನಾಶಪಡಿಸುವ ಎಚ್ಚರಿಕೆ..!

ಕಬ್ಬು ಬೆಳೆಗಾರರ ಹೋರಾಟ ಅಂತ್ಯ, ಶುಕ್ರವಾರದಿಂದ ಕಾರ್ಖಾನೆಗಳು ಆರಂಭ: ರೈತ ಮುಖಂಡ ಚೂನಪ್ಪ ಪೂಜಾರಿ

Asian Champions Trophy 2026 Final: ಜಪಾನ್ ವಿರುದ್ಧ 4-1 ಅಂತರದ ಗೆಲುವು; ದಾಖಲೆ ನಿರ್ಮಿಸಿದ ಭಾರತಕ್ಕೆ 6ನೇ ಟ್ರೋಫಿ