ಸಾಂದರ್ಭಿಕ ಚಿತ್ರ 
ದೇಶ

ನೇತಾಜಿ ಸುಭಾಷ್ ಚಂದ್ರ ಬೋಸ್ 120ನೇ ಜಯಂತಿ: ಪ್ರಧಾನಿ ಮೋದಿ ಗೌರವಾರ್ಪಣೆ

ಹಿರಿಯ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ 120ನೇ ಜಯಂತಿ ಅಂಗವಾಗಿ ಪ್ರಧಾನ...

ನವದೆಹಲಿ:  ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.
ದಶಕಗಳಿಂದ ಬೇಡಿಕೆಯಲ್ಲಿರುವ ನೇತಾಜಿಯವರಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಹಿರಂಗಪಡಿಸಲು ತಮಗೆ ಅವಕಾಶ ಸಿಕ್ಕಿರುವುದು ಅವರಿಗೆ ನೀಡುವ ಗೌರವ ಎಂದು ಸುಭಾಷ್ ಚಂದ್ರ ಬೋಸ್ ಹೇಳಿದ್ದಾರೆ.
ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಭಾರತಕ್ಕೆ ಮುಕ್ತಿ ಸಿಗಲು ನೇತಾಜಿಯವರು ಹೋರಾಡಲು ಪ್ರಮುಖ ಪಾತ್ರ ವಹಿಸಿದ್ದರು. ಅತ್ಯಂತ ಬುದ್ಧಿಶಾಲಿಗಳಾಗಿದ್ದ ನೇತಾಜಿಯವರು ದೇಶದ ಜನರ ಹಿತಾಸಕ್ತಿ ಬಯಸಿದ್ದು ಇಡೀ ಸಮಾಜದ ಬಡಬಗ್ಗರು ಮತ್ತು ದೀನದಲಿತರ ಏಳಿಗೆಗಾಗಿ ಶ್ರಮಿಸಿದ್ದರು ಎಂದು ಟ್ವೀಟ್ ಮೂಲಕ ಪ್ರಧಾನಿ ಪ್ರಶಂಸಿಸಿದ್ದಾರೆ.
ನೇತಾಜಿಯವರಿಗೆ ಸಂಬಂಧಪಟ್ಟ ದಾಖಲೆಗಳು http://www.netajipapers.gov.in ನಲ್ಲಿ ಲಭ್ಯವಾಗುತ್ತದೆ.ಈ ಮಧ್ಯೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಎಂ.ವೆಂಕಯ್ಯ ನಾಯ್ಡು, ನೇತಾಜಿಯವರನ್ನು ಕಟ್ಟಾ ರಾಷ್ಟ್ರವಾದಿ ಮತ್ತು ಭಾರತವನ್ನು  ಬ್ರಿಟಿಷರ ಆಡಳಿತದಿಂದ ಮುಕ್ತಗೊಳಿಸಲು ನಿರಂತರವಾಗಿ ಹೋರಾಡುತ್ತಿದ್ದರು ಎಂದು ಬಣ್ಣಿಸಿದ್ದಾರೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಒಡಿಶಾದ ಕಟಕ್ ನಲ್ಲಿ 1897ರಂದು ಜನಿಸಿದ್ದರು. ನೇತಾಜಿಯವರ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ ಇಂದು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನೇತಾಜಿಯವರಿಗೆ ಪುಷ್ಪ ನಮನ ಸಲ್ಲಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!