ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ನ್ನು ಮುಂದೂಡುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜ.23 ರಂದು ವಜಾಗೊಳಿಸಿದೆ.
5 ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿರುವ ವೇಳೆಯಲ್ಲೇ ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆಯ ಕಾರಣ ನೀಡಿ ಮುಂದೂಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. "ಕೇಂದ್ರ ಬಜೆಟ್ ಚುನಾವಣೆ ನಡೆಯಲಿರುವ ರಾಜ್ಯಗಳ ಮತದಾರರ ಮೇಲೆ ಪ್ರಭಾವ ಬೀರುತ್ತದೆ ಎಂಬುದಕ್ಕೆ ಸೂಕ್ತ ಉದಾಹರಣೆ, ದೃಷ್ಟಾಂತಗಳಿಲ್ಲ ಆದ್ದರಿಂದ ಬಜೆಟ್ ಮುಂದೂಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪೀಂ ಕೋಟ್ ನ ನ್ಯಾಯಾಧೀಶರಾದ ಡಿವೈ ಚಂದ್ರಚೂಡ್, ನ್ಯಾ.ಜೆಎಸ್ ಶೇಖರ್ ನೇತೃತ್ವದ ಪೀಠ ಹೇಳಿದೆ.
ಚುನಾವಣೆ ಸಂದರ್ಭದಲ್ಲಿ ಬಜೆಟ್ ಮಂಡಿಸುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಅಡ್ವೊಕೇಟ್ ಎಂಎಲ್ ಶರ್ಮಾ, ಚುನಾವಣೆ ಮುಗಿದ ಬಳಿಕ ಬಜೆಟ್ ನ್ನು ಮಂಡಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದರು.