ಜಲ್ಲಿಕಟ್ಟು: 2016 ರ ಅಧಿಸೂಚನೆಯನ್ನು ವಾಪಸ್ ಪಡೆದ ಕೇಂದ್ರ ಸರ್ಕಾರ 
ದೇಶ

ಜಲ್ಲಿಕಟ್ಟು: 2016 ರ ಅಧಿಸೂಚನೆಯನ್ನು ವಾಪಸ್ ಪಡೆದ ಕೇಂದ್ರ ಸರ್ಕಾರ

ತಮಿಳುನಾಡು ವಿಧಾನಸಭೆಯಲ್ಲಿ ಜ.24 ರಂದು ಅಂಗೀಕಾರಗೊಂಡ ಜಲ್ಲಿಕಟ್ಟು ವಿಧೇಯಕಕ್ಕೆ ಪೂರಕವಾಗಿ, ಕೇಂದ್ರ ಸರ್ಕಾರ 2016 ರ ಅಧಿಸೂಚನೆಯನ್ನು ಹಿಂಪಡೆಯುವುದಾಗಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ನವದೆಹಲಿ: ತಮಿಳುನಾಡು ವಿಧಾನಸಭೆಯಲ್ಲಿ ಜ.24 ರಂದು ಅಂಗೀಕಾರಗೊಂಡ ಜಲ್ಲಿಕಟ್ಟು ವಿಧೇಯಕಕ್ಕೆ ಪೂರಕವಾಗಿ, ಕೇಂದ್ರ ಸರ್ಕಾರ 2016 ರ ಅಧಿಸೂಚನೆಯನ್ನು ಹಿಂಪಡೆಯುವುದಾಗಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. 
ಕೇಂದ್ರ ಸರ್ಕಾರ 2016 ರ ಅಧಿಸೂಚನೆಯನ್ನು ವಾಪಸ್ ಪಡೆಯಲು ನಿರ್ಧರಿಸಿರುವ ಬಗ್ಗೆ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್ ಪೀಠಕ್ಕೆ ಹೇಳಿದ್ದು, 2016 ರ ಜ.6 ರಂದು ಕೇಂದ್ರ ಪರಿಸರ ಹಾಗು ಅರಣ್ಯ ಇಲಾಖೆ ಹೊರಡಿಸಿದ್ದ ಅಧಿಸೂಚನೆಯನ್ನು ವಾಪಸ್ ಪಡೆಯಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. 
ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದ್ದು, ಕೇಂದ್ರ ಸರ್ಕಾರದ ಅರ್ಜಿಯನ್ನು ಯಾವಾಗ ಪರಿಗಣಿಸಬೇಕೆಂಬ ಬಗ್ಗೆ ಸಂಬಂಧಿಸಿದ ಪೀಠ ನಿರ್ಧರಿಸಲಿದೆ ಎಂದು ಹೇಳಿದೆ. 
ಜ.23 ರಂದು ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದ್ದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ತಿದ್ದುಪಡಿ ಕಾಯ್ದೆಯನ್ನು ಶೀಘ್ರವೇ ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳಿಸಲಾಗುತ್ತಿದೆ. ಜಲ್ಲಿಕಟ್ಟು ಕ್ರೀಡೆಯನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ಜಾರಿಗೆ ತರಲಾಗಿರುವ ತಿದ್ದುಪಡಿ ಕಾಯ್ದೆಯ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗಳನ್ನು ವಿಚಾರಣೆ ನಡೆಸುವುದಾದರೆ, ಜಲ್ಲಿಕಟ್ಟು ಪರವಾಗಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಆದ್ಯತೆ ನೀಡಬೇಕೆಂದು 70 ಅರ್ಜಿಗಳು ಸಲ್ಲಿಕೆಯಾಗಿವೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!