ನವದೆಹಲಿ: ಢಾಕಾದಲ್ಲಿ ಲ್ಯಾಂಡಿಂಗ್ ವೇಳೆ ಜೆಟ್ ಏರ್ ವೇಸ್ ವಿಮಾನದ ರೆಕ್ಕೆ ರನ್ ವೇಗೆ ಅಪ್ಪಳಿಸಿದ್ದು, ಅದೃಷ್ಟವಶಾತ್ ವಿಮಾನದಲ್ಲಿದ್ದ 168 ಮಂದಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಕಳೆದ ಜನವರಿ 22ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಗಿಕೆ ಬಂದಿದೆ.
ಜೆಟ್ ಏರ್ ವೇಸ್ ನ 9ಡಬ್ಲ್ಯೂ-276 ಮುಂಬೈ-ಢಾಕಾ ವಿಮಾನದಲ್ಲಿ 160 ಪ್ರಯಾಣಿಕರು ಹಾಗೂ ಎಂಟು ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಅಥವಾ ಸಿಬ್ಬಂದಿಗೆ ಗಾಯಗಳಾಗಿಲ್ಲ ಏರ್ ಲೈನ್ ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಮಾಹಿತಿ ನೀಡಲಾಗಿದ್ದು, ಮೂಲಗಳ ಪ್ರಕಾರ, ಬಾಂಗ್ಲಾದೇಶ ನಾಗರಿಕ ವಿಮಾನಯಾನ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.