ದೇಶ

ಚುನಾವಣೆಗಳು ಪ್ರಜಾಪ್ರಭುತ್ವದ ಆಚರಣೆಗಳಾಗಿವೆ: ಪ್ರಧಾನಿ ಮೋದಿ

Manjula VN

ನವದೆಹಲಿ: ರಾಷ್ಟ್ರೀಯ ಮತದಾರರ ದಿನ'ದ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದು, ಚುನಾವಣೆಗಳು ಪ್ರಜಾಪ್ರಭುತ್ವದ ಆಚರೆಗಳಾಗಿದ್ದು, ಅದು ಜನರ ಇಚ್ಛೆಗಳನ್ನು ತಿಳಿಸುತ್ತದೆ ಎಂದು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಅವರು, ರಾಷ್ಟ್ರೀಯ ದಿನಾಚರಣೆಯ ದಿನವಾಗಿದ್ದು, ಈ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಚುನಾವಣಾ ಆಯೋಗಕ್ಕೂ ಶುಭಾಶಯಗಳನ್ನು ಕೋರುತ್ತಿದ್ದು, ದೇಶದ ಪ್ರಜಾಪ್ರಭುತ್ವದಲ್ಲಿ ಅವರ ಪ್ರಮುಖ ಪಾತ್ರಕ್ಕೆ ಸೆಲ್ಯೂಟ್ ಹೊಡೆಯುತಿದ್ದೇನೆಂದು ಹೇಳಿದ್ದಾರೆ.

ಚುನಾವಣೆಗಳು ಪ್ರಜಾಪ್ರಭುತ್ವದ ಆಚರಣೆಗಳಾಗಿದ್ದು, ಅದು ಜನರ ಇಚ್ಛೆಗಳನ್ನು ತಿಳಿಸುತ್ತವೆ. ಅವು ನಮ್ಮ ಪ್ರಜಾಪ್ರಭುತ್ವದಲ್ಲಿ ಸರ್ವೋಚ್ಛವಾಗಿರುತ್ತದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಜನತೆಗೆ ಮನವಿ ಮಾಡಿಕೊಂಡಿರುವ ಅವರು, ಅರ್ಹ ಮತದಾರರು ತಮ್ಮ ಮತಗಳನ್ನು ಹಾಕಬೇಕಿದ್ದು, 18 ವರ್ಷವಾಗುತ್ತಿದ್ದಂತೆ ಯುವತರು ಮತದಾರರಾಗಿ ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ.

1950ರ ಜನವರಿ 25ರಂದು ಚುನಾವಣಾ ಆಯೋಗವನ್ನು ಸ್ಥಾಪನೆ ಮಾಡಲಾಗಿತ್ತು. ಅಂದಿನಿಂದ ಜ.25 ನ್ನು ರಾಷ್ಟ್ರೀಯ ಮತದಾರರ ದಿನವಾಗಿ ಆಚರಿಸಲಾಗುತ್ತಿದೆ.

SCROLL FOR NEXT