ಪ್ರಿಯಾಂಕಾ ಗಾಂಧಿ 
ದೇಶ

ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕಿಯಾಗಿ ಪ್ರಿಯಾಂಕಾ ವಾದ್ರಾ

ಹಿಂದಿ ಭಾಷಿಗರೇ ಹೆಚ್ಚಾಗಿರುವ ಉತ್ತರ ಪ್ರದೇಶದ ವಿಧಾನ ಸಭೆ ಚುನಾವಣೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಟಾರ್ ಪ್ರಚಾರಕಿಯನ್ನಾಗಿ ...

ನವದೆಹಲಿ: ಹಿಂದಿ ಭಾಷಿಗರೇ ಹೆಚ್ಚಾಗಿರುವ ಉತ್ತರ ಪ್ರದೇಶದ ವಿಧಾನ ಸಭೆ ಚುನಾವಣೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಟಾರ್ ಪ್ರಚಾರಕಿಯನ್ನಾಗಿ ನೇಮಕಗೊಳಿಸಲಾಗಿದೆ.

ಪಕ್ಷದ 40 ಸ್ಟಾರ್ ಪ್ರಚಾರಕರಲ್ಲಿ ಪ್ರಿಯಾಂಕಾ ಗಾಂಧಿಗೆ 9ನೇ ಸ್ಥಾನ ನೀಡಲಾಗಿ ಚುನಾವಣಾ ಆಯೋಗಕ್ಕೆ ಪಟ್ಟಿಯನ್ನು ಸಲ್ಲಿಸಲಾಗಿದೆ. ಸೋನಿಯಾ ಗಾಂಧಿ ಅನಾರೋಗ್ಯ ಹಾಗೂ ರಾಹುಲ್ ಗಾಂಧಿ ಅಪಕ್ವತೆಯಿಂದ ನಾಯಕತ್ವದ ಕೊರತೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಪ್ರಿಯಾಂಕಾ ಗಾಂಧಿ ಹೊಸ ಚೈತನ್ಯ ತುಂಬುವ ಸಾಧ್ಯತೆಯಿದೆ.

ಇದುವರೆಗೂ ತನ್ನ ತಾಯಿ ಹಾಗೂ ಸಹೋದರ ಸ್ಪರ್ದಿಸುವ ಉತ್ತರ ಪ್ರದೇಶದ ಅಮೇಥಿ, ರಾಯ್ ಬರೇಲಿ, ಹಾಗೂ ಸುಲ್ತಾನ್ ಪುರಗಳಲ್ಲಿ ನಡೆಯುವ ಪ್ರಚಾರದಲ್ಲಿ ಮಾತ್ರ ಪ್ರಿಯಾಂಕಾ ಪಾಲ್ಗೊಳ್ಳುತ್ತಿದ್ದರು. ಈಗ ತಮ್ಮ ಸ್ನೇಹಿತೆ ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ಪತ್ನಿ ಡಿಂಪಲ್ ಯಾದವ್ ಜೊತೆ ಪ್ರಚಾರ ಕೈಗೊಳ್ಳಲಿದ್ದಾರೆ.

ಈವರೆಗೆ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕೀಯಕ್ಕೆ ಬರುವ ಕುರಿತು ಯಾವ ನಾಯಕರೂ ಬಹಿರಂಗ ಹೇಳಿಕೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜತೆ ಸೀಟು ಹಂಚಿಕೆ ಒಪ್ಪಂದ ಕುದುರಿಸುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ವಹಿಸಿದ ಪಾತ್ರವನ್ನು ಅಹ್ಮದ್ ಪಟೇಲ್ ಟ್ವೀಟ್​ನಲ್ಲಿ ಶ್ಲಾಘಿಸಿದ್ದಾರೆ.

ಉತ್ತರಪ್ರದೇಶ ಚುನಾವಣೆ ಬಳಿಕ ಪಕ್ಷದಲ್ಲಿ ಹಲವು ಹಂತಗಳಲ್ಲಿ ಬದಲಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ನೀಡುವ ಮತ್ತು ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬರುವ ನಿರ್ಧಾರಗಳು ಉತ್ತರ ಪ್ರದೇಶ ಚುನಾವಣೆ ನಂತರ ನಿರ್ಧಾರಗೊಳ್ಳಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT