ಅಮರಿಂದರ್ ಸಿಂಗ್ 
ದೇಶ

ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದರೆ ಅಕಾಲಿ ದಳಕ್ಕೆ ಮತ ಹಾಕಿದಂತೆಯೇ: ಅಮರಿಂದರ್ ಸಿಂಗ್

ಪಂಜಾಬ್ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದರೆ ಅದು ಶಿರೋಮಣಿ ಅಕಾಲಿ ದಳಕ್ಕೆ ಮತ ಹಾಕಿದಂತೆ ಎಂದು ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಚಂಡೀಗಢ: ಪಂಜಾಬ್ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದರೆ ಅದು ಶಿರೋಮಣಿ ಅಕಾಲಿ ದಳಕ್ಕೆ ಮತ ಹಾಕಿದಂತೆ ಎಂದು ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಮರಿಂದರ್ ಸಿಂಗ್ ಹೇಳಿದ್ದಾರೆ. 
ಆಮ್ ಆದ್ಮಿ ಪಕ್ಷ ಹಾಗೂ ಶಿರೋಮಣಿ ಅಕಾಲಿದಳ ಪಕ್ಷಗಳನ್ನು ಮೂಲಭೂತವಾದಿ ಸಿದ್ಧಾಂತಗಳನ್ನು ಹೊಂದಿರುವ ಪಕ್ಷಗಳೆಂದು ಹೇಳಿರುವ ಅಮರಿಂದರ್ ಸಿಂಗ್, ಎಚ್ಚರಿಕೆಯಿಂದ ಮತ ಚಲಾವಣೆ ಮಾಡುವಂತೆ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.  ಅಕಾಲಿದಳದವರು 10 ವರ್ಷಗಳಿಂದ ಪಂಜಾಬ್ ರಾಜ್ಯವನ್ನು ಲೂಟಿ ಮಾಡುತ್ತಿದ್ದರೆ ಆಮ್ ಆದ್ಮಿ ಪಕ್ಷ ಪಂಜಾಬಿಯತ್ ನ್ನು ಹಾಳು ಮಾಡಲು ಹೊರಗಿನಿಂದ ಜನರನ್ನು ಕರೆಸಿದೆ ಎಂದು ಸಾರ್ವಜನಿಕ ಸಭೆಯಲ್ಲಿ ಆರೋಪಿಸಿದ್ದಾರೆ. 
ಅಕಾಲಿ ದಳದ ಆಡಳಿತದಲ್ಲಿ ಜನತೆ ಸಾಕಷ್ಟು ನೊಂದಿದ್ದಾರೆ. ಪಂಜಾಬ್ ನ್ನು ಲೂಟಿ ಮಾಡಿರುವ ಪ್ರಕಾಶ್ ಸಿಂಗ್ ಬಾದಲ್ ಕ್ಷೇತ್ರದಿಂದಲೇ ಸ್ಪರ್ಧಿಸಿ ಪಾಠ ಕಲಿಸಲಿದ್ದೇನೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT