ದೇಶ

ಉತ್ತರ ಪ್ರದೇಶ ಚುನಾವಣೆ ನಂತರ ಬಜೆಟ್ ಮಂಡಿಸುವಂತೆ ಕೋರಿ ಪ್ರಧಾನಿಗೆ ಅಖಿಲೇಶ್ ಯಾದವ್ ಪತ್ರ

Sumana Upadhyaya
ಲಕ್ನೋ: ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಕೇಂದ್ರ ಬಜೆಟ್ ಮಂಡಿಸದಂತೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಭಾರತದ ಅತಿ ದೊಡ್ಡ ಮತ್ತು ಖ್ಯಾತ ರಾಜ್ಯ ಉತ್ತರ ಪ್ರದೇಶವಾಗಿದ್ದು, ಅಲ್ಲಿ ಫೆಬ್ರವರಿ 11ರಂದು ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಅಂದರೆ ಫೆಬ್ರವರಿ 1ರಂದು ಬಜೆಟ್ ಮಂಡಿಸಿದರೆ ತಮ್ಮ  ರಾಜ್ಯ ಹಲವು ಯೋಜನೆಗಳಿಂದ ವಂಚಿತವಾಗುತ್ತದೆ ಎಂದು ಅಖಿಲೇಶ್ ಯಾದವ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ.
ಕೇಂದ್ರ ಬಜೆಟ್ ಮಂಡಿಸಲು ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್ ಈಗಾಗಲೇ ಅನುಮತಿ ನೀಡಿದೆ. ಅದರಂತೆ ಫೆಬ್ರವರಿ 1ರಂದೇ ಬಜೆಟ್ ಮಂಡನೆಯಾಗಲಿದೆ. ಆದರೆ ಚುನಾವಣೆಯನ್ನು ಎದುರಿಸುತ್ತಿರುವ ಐದು ರಾಜ್ಯಗಳ ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಘೋಷಣೆಗಳನ್ನು ಕೇಂದ್ರ ಸರ್ಕಾರ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶಿಸಿದೆ.
SCROLL FOR NEXT