ಕಂಬಳ ನಿಷೇಧ ವಿರೋಧಿಸಿ ಪ್ರತಿಭಟನೆ 
ದೇಶ

ಮಂಗಳೂರು: ಕಂಬಳ ನಿಷೇಧದ ವಿರುದ್ಧ ಬೃಹತ್ ಪ್ರತಿಭಟನೆ

ಕಂಬಳವನ್ನು ನಿಷೇಧಿಸಿರುವುದನ್ನು ವಿರೋಧಿಸಿ, ಮಂಗಳೂರಿನ ಕಂಪನ ಕಟ್ಟೆಯಲ್ಲಿ ಜ.27 ರಂದು ಬೃಹತ್ ಪ್ರತಿಭಟನೆ ನಡೆದಿದೆ.

ಮಂಗಳೂರು: ಕಂಬಳವನ್ನು ನಿಷೇಧಿಸಿರುವುದನ್ನು ವಿರೋಧಿಸಿ, ಮಂಗಳೂರಿನ ಕಂಪನ ಕಟ್ಟೆಯಲ್ಲಿ ಜ.27 ರಂದು ಬೃಹತ್ ಪ್ರತಿಭಟನೆ ನಡೆದಿದೆ. 
ಸಾವಿರಾರು ಮಂದಿ ವಿದ್ಯಾರ್ಥಿಗಳು, ತುಳು ಚಿತ್ರರಂಗದ ಕಲಾವಿದರು, ಜನಪ್ರತಿನಿಧಿಗಳು ಮಾನವ ಸರಪಳಿ ನಿರ್ಮಿಸಿ ಕಂಬಳದ ಪರ ಪ್ರತಿಭಟನೆ ನಡೆಸಿದ್ದಾರೆ. ಕಂಬಳ ಕ್ರೀಡೆಯನ್ನು ವಿರೋಧಿಸುತ್ತಿರುವ ಪೇಟಾ ಸಂಘಟನೆಯನ್ನು ನಿಷೇಧಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದು, ಪೇಟಾ ಜಲ್ಲಿಕಟ್ಟು ಹಾಗೂ ಕಂಬಳದ ನಡುವಿನ ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. 
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿರುವ ಸಂಸದ ನಳಿನ್ ಕುಮಾರ್ ಕಟೀಲು, " ಕಂಬಳ ತುಳುನಾಡಿನ ಸಂಸ್ಕೃತಿಯಾಗಿದೆ. ಜಲ್ಲಿಕಟ್ಟು, ಕಂಬಳದ ನಡುವಿನ ವ್ಯತ್ಯಾಸವನ್ನು ತಿಳಿಯಲಾಗದೇ ಪೇಟಾ ಕಂಬಳವನ್ನು ನಿಷೇಧಿಸುವುದಕ್ಕೆ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಕಂಬಳದಲ್ಲಿ ಕ್ರೌರ್ಯ ಇಲ್ಲ ಎಂಬುದನ್ನು ಪೇಟಾ ಅರ್ಥ ಮಾಡಿಕೊಳ್ಳಬೇಕು, ಕಂಬಳದ ಮೇಲಿನ ನಿಷೇಧವನ್ನು ತೆರವುಗೊಳಿಸಲು ನಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಬೇಕು ಎಂದು ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ