ನರೇಂದ್ರ ಮೋದಿ 
ದೇಶ

ಮೋದಿ ಮನ್ ಕಿ ಬಾತ್ ಗೆ ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್

ನಾಳೆ ಆಲ್ ಇಂಡಿಯಾ ರೇಡಿಯೋದಲ್ಲಿ ಪ್ರಸಾರವಾಗಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ...

ನವದೆಹಲಿ: ನಾಳೆ ಆಲ್ ಇಂಡಿಯಾ ರೇಡಿಯೋದಲ್ಲಿ ಪ್ರಸಾರವಾಗಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಕೇಂದ್ರ ಚುನಾವಣಾ ಆಯೋಗ ಶನಿವಾರ ಗ್ರೀನ್ ಸಿಗ್ನಲ್ ನೀಡಿದೆ.
ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಉತ್ತರ ಪ್ರದೇಶ, ಗೋವಾ, ಪಂಜಾಬ್, ಉತ್ತರಾಖಂಡ್ ಹಾಗೂ ಮಣಿಪುರದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನಿ ರೇಡಿಯೋ ಕಾರ್ಯಕ್ರಮಕ್ಕೆ ಅನುಮತಿ ಕೋರಿತ್ತು.
ಪ್ರಧಾನಿ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಇಂದು ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ ತಮ್ಮ ರೇಡಿಯೋ ಭಾಷಣದಲ್ಲಿ ಮಾರ್ಚ್ 9ರಿಂದ ಆರಂಭವಾಗಲಿರುವ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಬಗ್ಗೆ ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!