ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉತ್ತರ ಪ್ರದೇಶ ಚುನಾವಣೆ: ನಾಳೆ ಅಖಿಲೇಶ್ ಯಾದವ್, ರಾಹುಲ್ ಗಾಂಧಿ ಜಂಟಿ ಪ್ರಚಾರ

ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಳೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ಜಂಟಿ ಪ್ರಚಾರ ....

ಅಖಿಲೇಶ್ ಯಾದವ್ ಮತ್ತು ರಾಹುಲ್ ಗಾಂಧಿ
Shilpa D
Updated On : 28 Jan 2017, 7:05 am
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಳೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ಜಂಟಿ ಪ್ರಚಾರ ನಡೆಸಲಿದ್ದಾರೆ.
'ಯುಪಿ ಕೋ ಹೇ ಸಾಥ್ ಪಸಂದ್ ಹೈ' ಎಂಬ ಘೋಷಣಾ ವಾಕ್ಯದೊಂದಿಗೆ ಇಬ್ಬರು ಯುವನಾಯಕರು ಜಂಟಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಎಸ್ ಪಿ ಮತ್ತು ಕಾಂಗ್ರೆಸ್ ಇರುವ 403 ವಿಧಾನ ಸಭಾ ಕ್ಷೇತ್ರಗಳಲ್ಲಿ 300 ಸೀಟುಗಳನ್ನು ಗೆಲ್ಲುವ ಭರವಸೆ ಹೊಂದಿವೆ.
ನಾಳೆ ಇಬ್ಬರು ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ರೋಡ್ ಶೋ ನಡೆಸಲಿದ್ದಾರೆ. ಕೋಮುವಾದಿ ಪಕ್ಷಗಳನ್ನು ಸೋಲಿಸಲು ರಾಜ್ಯದ ಜನತೆ ಒಟ್ಟಾಗಿ ಎಸ್ ಪಿ ಮತ್ತು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಹಿರಿಯ ಸಮಾಜವಾದಿ ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.

Advertisement

Advertisement

'ಯುಪಿ ಕೋ ಹೇ ಸಾಥ್ ಪಸಂದ್ ಹೈ' ಘೋಷಣಾ ವಾಕ್ಯದೊಂದಿಗೆ ಇಬ್ಬರು ನಾಯಕರ ಚಿತ್ರಗಳು ಹಾಗೂ ಎರಡು ಪಕ್ಷಗಳ ಚಿಹ್ನೆಗಳನ್ನು ಹೊಂದಿರುವ ಪೋಸ್ಟರ್ ಕೂಡ ನಾಳೆ ಬಿಡುಗಡೆಯಾಗಲಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement