ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ 
ದೇಶ

ಸಮಾಜವಾದಿ ಪಕ್ಷ-ಕಾಂಗ್ರೆಸ್ ಮೈತ್ರಿ ಉತ್ತರಪ್ರದೇಶದ ಶಕ್ತಿಯನ್ನು ಹೆಚ್ಚಿಸುತ್ತದೆ: ರಾಹುಲ್ ಗಾಂಧಿ

ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿ ಉತ್ತರಪ್ರದೇಶದ ಶಕ್ತಿಯನ್ನು ಹೆಚ್ಚಿಸಲಿದ್ದು, ನಮ್ಮ ಮೈತ್ರಿ ರಾಜ್ಯ ಅಭಿವೃದ್ಧಿ, ಸಮೃದ್ಧಿ ಹಾಗೂ ಶಾಂತಿ ಕಾಪಾಡುವ ಸಲುವಾಗಿ ಆಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ...

ಲಖನೌ: ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿ ಉತ್ತರಪ್ರದೇಶದ ಶಕ್ತಿಯನ್ನು ಹೆಚ್ಚಿಸಲಿದ್ದು, ನಮ್ಮ ಮೈತ್ರಿ ರಾಜ್ಯ ಅಭಿವೃದ್ಧಿ, ಸಮೃದ್ಧಿ ಹಾಗೂ ಶಾಂತಿ ಕಾಪಾಡುವ ಸಲುವಾಗಿ ಆಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳ ಮೈತ್ರಿ ಕುರಿತಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಜಂಟಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ರಾಹುಲ್ ಗಾಂಧಿಯವರು, ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳ ಮೈತ್ರಿ ಒಡಕು ರಾಜಕೀಯಕ್ಕೆ ಉತ್ತಮವಾದ ಉತ್ತರವಾಗಲಿದೆ ಎಂದು ಹೇಳಿದ್ದಾರೆ.

ಪಕ್ಷಗಳ ಮೈತ್ರಿ ಗಂಗಾ-ಯಮುನಾ ಸಂಗಮದಂತೆ. ಮೈತ್ರಿಯಿಂದ ರಾಜ್ಯದಲ್ಲಿ ಅಭಿವೃದ್ಧಿಯಾಗಲಿದೆ. ಅಖಿಲೇಶ್ ಅವರಿಗೆ ನಾನು ಈ ಹಿಂದೆಯೇ ಹೇಳಿದ್ದೆ, ಉತ್ತಮ ಕೆಲಸ ಮಾಡಲು ನಿಮಗೆ ಅವಕಾಶ ಸಿಗುವುದಿಲ್ಲ ಎಂದು ನಾನು ಹೇಳಿದ್ದೆ. ಅಖಿಲೇಶ್ ಹಾಗೂ ನಮ್ಮಿಬ್ಬರ ನಡುವೆ ಸಾಕಷ್ಟು ಹೋಲಿಕೆ ಹಾಗೂ ಭಿನ್ನತೆಗಳಿವೆ. ಕೆಲ ವಿಚಾರಗಳ ಬಗ್ಗೆ ನಾವು ಸಂಧಾನ ಮಾಡಿಕೊಂಡು ಮುನ್ನಡೆಯುತ್ತೇವೆಂದು ಹೇಳಿದ್ದಾರೆ.

ಇದೇ ವೇಳೆ ಸೋನಿಯಾ ಗಾಂಧಿ ಹಾಗೂ ಮುಲಾಯಂ ಸಿಂಗ್ ಯಾದವ್ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ರಾಹುಲ್ ಅವರು, ಚುನಾವಣಾ ಪ್ರಚಾರದ ತಂತ್ರಗಳನ್ನು ನಾವು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದ್ದಾರೆ.

ನಂತರ ಪ್ರಧಾನಿ ಮೋದಿಯವರ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮಗೆ ತಾವೇ ನಂಬರ್ 1 ನಾಯಕರೆಂದು ತಿಳಿದಿದ್ದಾರೆ. ಅವರ ಪ್ರಕಾರ ನಂ.2 ಇಲ್ಲ ಎಂದಿದ್ದಾರೆ.

ಭ್ರಷ್ಟಾಚಾರ ಮುಕ್ತ ಭಾರತ ಮಾಡುತ್ತೇವೆಂದು ಮಾತನಾಡುವ ಪ್ರಧಾನಿ ಮೋದಿಯವು ತಾವೇ ಸ್ವತಃ ಅಕಾಲಿ ದಳಕ್ಕೆ ಬೆಂಬಲ ವ್ಯಕ್ತಪಡಿಸುತ್ತಾರೆಂದು ತಿಳಿಸಿದ್ದಾರೆ.

ನಂತರ ಮಾತನಾಡಿದ ಅಖಿಲೇಶ್ ಯಾದವ್ ಅವರು, ನಾವು ಒಂದೇ ಸೈಕಲಿನ ಎರಡು ಚಕ್ರವಿದ್ದಂತೆ. ನಮ್ಮಲ್ಲಿ ಬೇರಾವುದೇ ವಿಭಿನ್ನತೆಗಳಿಲ್ಲ. ಇಂದಿನಿಂದ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video