ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದೀಗ ಪಂಜಾಬ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು ಕಳೆದ ರಾತ್ರಿ ಮಾಜಿ ಉಗ್ರನ ಮನೆಯಲ್ಲಿ ವಾಸ್ತವ್ಯ ಹೂಡುವ ಮೂಲಕ ತೀವ್ರ ಚರ್ಚೆಗೆ ಗ್ರಾಸವಾಗಿದ್ದಾರೆ.
ಫೆಬ್ರವರಿ 4 ರಂದು ಪಂಜಾಬ್ ವಿಧಾನಸಭೆ ಚುನಾವಣಾ ಮತದಾನ ನಡೆಯಲಿದ್ದು ಕೆಲ ದಿನಗಳಿಂದ ಪಕ್ಷದ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಶನಿವಾರ ಝೀರಾ ಎಂಬಲ್ಲಿ ರ್ಯಾಲಿಯಲ್ಲಿ ಭಾಗವಹಿಸಿದ್ದ ಕೇಜ್ರಿವಾಲ್ ರಾತ್ರಿ ಮೋಗಾದಲ್ಲಿರುವ ಖಲಿಸ್ತಾನ ಕಮಾಂಡೋ ಫೋರ್ಸ್ ನ ಮಾಜಿ ಉಗ್ರ ಗುರಿಂದರ್ ಸಿಂಗ್ ಅವರ ಮನೆಯಲ್ಲಿ ಗುಟ್ಟಾಗಿ ವಾಸ್ತವ್ಯ ಹೂಡಿದ್ದರು.
ಆಮ್ ಆದ್ಮಿ ಪಕ್ಷ ಮೂಲಭೂತವಾದಿಗಳಿಗೆ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ಮತ್ತು ಅಕಾಲಿದಳದ ಮುಖಂಡರು ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಪಂಜಾಬ್ ನಲ್ಲಿ ಅಧಿಕಾರಕ್ಕೇರುವ ಸಲುವಾಗಿ ಕೇಜ್ರಿವಾಲ್ ಮೂಲಭೂತವಾದಿಗಳೊಂದಿಗೆ ಕೈಜೋಡಿಸುತ್ತಿದ್ದಾರೆ. ರಾಜ್ಯದ ಶಾಂತಿ ಸೌಹಾರ್ದತೆಗೆ ಭಂಗ ತರಲು ಕೇಜ್ರಿವಾಲ್ ಯತ್ನಿಸುತ್ತಿದ್ದಾರೆ ಎಂದು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.