ಅಹ್ಮದಾಬಾದ್: ಗುಜರಾತ್ ನ ದಹೇಜ್ ಪ್ರಾಂತ್ಯದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಖಾಸಗಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಸುಮಾರ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆಯಾದರೂ ಬೆಂಕಿ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ ಎಷ್ಟು ಮಂದಿ ಕಾರ್ಮಿಕರಿದ್ದರು ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಈ ವರೆಗೂ ಯಾವುದೇ ಪ್ರಾಣ ಹಾನಿಯಾದ ಕುರಿತು ವರದಿಯಾಗಿಲ್ಲ. ಸುಮಾರು 35ಕ್ಕೂ ಅಧಿಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದು, ಘಟನಾ ಸ್ಥಳದಲ್ಲಿ ಭಾರಿ ಜನಸ್ತೋಮ ನೆರೆದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗತ್ತಿದೆ.