ನವದೆಹಲಿ: ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಲ್ಲಿಕಟ್ಟು ಮೇಲಿನ ನಿಷೇಧವನ್ನು ತೆರವುಗೊಳಿಸಿದರ ವಿರುದ್ಧ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಆದರೆ ಜಲ್ಲಿಕಟ್ಟು ನಿಷೇಧಿಸಿ ತಾನು ನೀಡಿದ್ದ ಆದೇಶವನ್ನು ಉಲ್ಲಂಘಿಸಲು ಜನತೆಗೆ ಅವಕಾಶ ಮಾಡಿಕೊಟ್ಟ ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ರೋಹಿನ್ಟೊನ್ ನಾರಿಮನ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಜಲ್ಲಿಕಟ್ಟು ಸಂಬಂಧ ತಮಿಳುನಾಡು ಸರ್ಕಾರ ತಂದಿರುವ ಕಾಯ್ದೆಯ ಅವಶ್ಯಕತೆ ಇತ್ತಾ ಎಂದು ಸುಪ್ರೀಂ ಪ್ರಶ್ನಿಸಿದೆ. ನಾಗರಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಯ ಪಾಲನೆ ನಿಮ್ಮ ಸರ್ಕಾರದ ಹೊಣೆ. ಇಂತಹ ಘಟನೆಗಳನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದೆ.
2014ರಲ್ಲಿ ಸುಪ್ರೀಂಕೋರ್ಟ್ ಹೋರಿಗಳನ್ನು ಓಡಿಸುವ ಸ್ಪರ್ಧೆ ನೆಪದಲ್ಲಿ ಅವುಗಳಿಗೆ ಹಿಂಸೆ ನೀಡಲಾಗುತ್ತಿದೆ ಎಂಬ ಆರೋಪಗಳನ್ನು ಆಧರಿಸಿ ಜಲ್ಲಿಕಟ್ಟುವಿಗೆ ನಿಷೇಧ ಹೇರಿತ್ತು.
ಜಲ್ಲಿಕಟ್ಟು ಮೇಲಿನ ನಿಷೇಧವನ್ನು ತೆರವುಗೊಳಿಸಿ ತಮಿಳುನಾಡು ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆ ಹಾಗೂ ಕಾಯ್ದೆಯ ಅಂಗೀಕಾರ ವಿರುದ್ಧ ಪ್ರಾಣಿ ಹಕ್ಕುಗಳ ಸಂಘ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics