ಗುವಾಹಟಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಪ್ರತಿಭಟನಾನಿರತರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಮಹಿಳಾ ಮೀಸಲಾತಿ ಕುರಿತಂತೆ ಬುಡಕಟ್ಟು ಸಮುದಾಯಗಳು ಚುನಾವಣೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಗುಂಡು ಹಾರಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಟಿಆರ್ ಜಿಲಿಯಾಂಗ್ ಖಾಸಗಿ ನಿವಾಸದ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸುವ ವೇಳೆಯಲ್ಲಿ ಪೊಲೀಸರ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಇಬ್ಬರು ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.