ಶ್ರೇಷ್ಠಾ ಠಾಕೂರ್ 
ದೇಶ

ಉತ್ತಮ ಕೆಲಸಕ್ಕೆ ಸಿಕ್ಕ ಪ್ರತಿಫಲ ಇದು: ವರ್ಗಾವಣೆ ಕುರಿತು ಯುಪಿ ಪೊಲೀಸ್ ಅಧಿಕಾರಿ

ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಬಿಜೆಪಿ ನಾಯಕರಿಗೆ ಮುಲಾಜಿಲ್ಲದೇ ದಂಡ....

ಲಖನೌ: ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಬಿಜೆಪಿ ನಾಯಕರಿಗೆ ಮುಲಾಜಿಲ್ಲದೇ ದಂಡ ವಿಧಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಶ್ರೇಷ್ಠಾ ಠಾಕೂರ್ ಅವರಿಗೆ ಉತ್ತರ ಪ್ರದೇಶ ಸರ್ಕಾರ ವರ್ಗಾವಣೆ ಸಿಕ್ಷೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳಾ ಪೊಲೀಸ್ ಅಧಿಕಾರಿ, ಇದು ನನ್ನ ಉತ್ತಮ ಕೆಲಸಕ್ಕೆ ಸಿಕ್ಕ ಪ್ರತಿಫಲ ಎಂದು ತಾವು ಭಾವಿಸುವುದಾಗಿ ಹೇಳಿದ್ದಾರೆ.
ಮಿತ್ರರೇ ಸರ್ಕಾರ ನನ್ನನ್ನು ವರ್ಗಾವಣೆ ಮಾಡಿರುವುದರಿಂದ ಬೇಸರವಾಗಿಲ್ಲ. ನನಗೆ ಸಂತೋಷವಾಗಿದೆ. ನನ್ನ ಉತ್ತಮ ಕೆಲಸಕ್ಕೆ ಸಿಕ್ಕ ಪ್ರತಿಫಲ ಇದಾಗಿದೆಯೆಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
ಬುಲಂದ್'ಶಹರ್ ಜಿಲ್ಲೆಯ ಸ್ಯಾನಾ ದಿಂದ ನೇಪಾಳ ಗಡಿಯಲಲಿರುವ ಬಹರೈಚ್ ಜಿಲ್ಲೆಗೆ ಶ್ರೇಷ್ಠಾರನ್ನು ಯೋಗಿ ಆದಿತ್ಯನಾಥ್ ಸರ್ಕಾರ ವರ್ಗಾವಣೆ ಮಾಡಿದೆ.
ಕಳೆದ ಜೂನ್ 22ರಂದು ಠಾಕೂರ್ ಮತ್ತು ಇತರ ಪೊಲೀಸರು ಸೈನಾ ಪ್ರದೇಶದಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆ ವೇಳೆ ಹೆಲ್ಮೆಟ್ ಧರಿಸದೆ ಬಂದ ಮೋಟಾರ್ ವಾಹನ ಸವಾರರೊಬ್ಬರಿಗೆ 200 ರುಪಾಯಿ ದಂಡ  ವಿಧಿಸಿದ್ದರೆ. ಈ ವೇಳೆ ಬೈಕ್ ಸವಾರ ತಾನು ಬಿಜೆಪಿ ನಾಯಕ ಪ್ರಮೋದ್ ಕುಮಾರ್, ತನ್ನ ಪತ್ನಿ ಬುಲಂದ್‍ ಶಹರ್ ಜಿಲ್ಲಾ ಪಂಚಾಯತ್ ಸದಸ್ಯೆ ಎಂದು ಹೇಳಿದ್ದರೂ, ಶ್ರೇಷ್ಠಾ ಠಾಕೂರ್ ಸುಮ್ಮನೆ ಬಿಟ್ಟಿರಲಿಲ್ಲ. ಟ್ರಾಫಿಕ್ ನಿಯಮ  ಉಲ್ಲಂಘಿಸಿದ್ದಕ್ಕಾಗಿ ಯಾವುದೇ ಮುಲಾಜಿಲ್ಲದೇ ದಂಡ ವಿಧಿಸಿದ್ದರು. ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದು ಮಾತ್ರವಲ್ಲದೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಕ್ಕಾಗಿ ಅಲ್ಲಿನ ಸ್ಥಳೀಯ ಬಿಜೆಪಿ ಮುಖಂಡ ಸೇರಿದಂತೆ ಐವರು  ಕಾರ್ಯಕರ್ತರನ್ನು ಅಧಿಕಾರಿ ಶ್ರೇಷ್ಠಾ ಠಾಕೂರ್ ಜೈಲಿಗಟ್ಟಿದ್ದರು. ಅಲ್ಲದೆ ತಪ್ಪು ಮಾಡಿದ್ರೆ ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನೂ ಕೂಡ ಬಿಡುವುದಿಲ್ಲ ಎಂದು ಗುಡುಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!