ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ಹಿಮಾಚಲ ಸಿಎಂ ಸಲ್ಲಿಸಿದ್ದ ಅರ್ಜಿ ವಜಾ

Lingaraj Badiger
ನವದೆಹಲಿ: ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಹಾಗೂ ಅವರ ಪತ್ನಿ ಮತ್ತು ಪುತ್ರನ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸೋಮವಾರ ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ವೀರಭದ್ರ ಸಿಂಗ್, ಅವರ ಪತ್ನಿ ಪ್ರತಿಭಾ ಸಿಂಗ್, ಪುತ್ರ ವಿಕ್ರಮಾದಿತ್ಯ ಸಿಂಗ್ ಮತ್ತು ಮತ್ತೊಬ್ಬ ವ್ಯಕ್ತಿ ಚುನ್ನಿ ಲಾಲ್ ಅವರು ಅರ್ಜಿ ಸಲ್ಲಿಸಿದ್ದರು.
ಜಾರಿ ನಿರ್ದೇಶನಾಲಯ 2015ರಲ್ಲಿ ಈ ನಾಲ್ವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, 83 ವರ್ಷದ ಹಿಮಾಚಲ ಪ್ರದೇಶ ಸಿಎಂ ಹಾಗೂ ಅವರ ಪತ್ನಿ, ಪುತ್ರನನ್ನು ವಿಚಾರಣೆಗೆ ಒಳಪಡಿಸಿತ್ತು.
ಇನ್ನು ಅಕ್ರಮವಾಗಿ 10 ಕೋಟಿ ರೂ. ಹಣ ಗಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಸಿಬಿಐ ಇತ್ತೀಚೆಗೆ ವೀರಭದ್ರ ಸಿಂಗ್, ಅವರ ಪತ್ನಿ ಮತ್ತು ಇತರ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. 
SCROLL FOR NEXT