ಹಿಜ್ಬುಲ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್
ನವದೆಹಲಿ: ಭಾರತದ ಯಾವುದೇ ಭಾಗದ ಮೇಲೆ ಬೇಕಾದರೂ ದಾಳಿ ಮಾಡಬಲ್ಲೆವು ಎಂದು ಹಿಜ್ಬುಲ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್ ಪಾಕಿಸ್ತಾನದಲ್ಲಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾನೆ.
ಪಾಕಿಸ್ತಾನದ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್, ಭಾರತದ ಮೇಲೆ ಯಾವಾಗ ಹಾಗೂ ಯಾವುದೇ ಭಾಗದ ಮೇಲೆ ಬೇಕಾದರೂ ನಾವು ದಾಳಿ ನಡೆಸಬಲ್ಲೆವು ಎಂದು ನೇರವಾಗಿ ಬೆದರಿಕೆ ಹಾಕಿದ್ದಾನೆ.
ನಾನು ಭಾರತದಲ್ಲಿ ನಾನು ಹಲವಾರು ಭಯೋತ್ಪಾದಕ ಕೃತ್ಯಗಳನ್ನು ನಡೆಸಿದ್ದೇನೆ. ನನ್ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಮೂರ್ಖ. ಭಾರತದಿಂದ ಕಾಶ್ಮೀರವನ್ನು ವಿಮೋಚನೆಗೊಳಿಸುವವರೆಗೂ ನಮ್ಮ ಹೋರಾಟ ಅಂತ್ಯಗೊಳ್ಳುವುದಿಲ್ಲ ಎಂದು ಹೇಳಿದ್ದಾನೆ.
ಕೆಲ ದಿನಗಳ ಹಿಂದಷ್ಟೇ ಅಮೆರಿಕ ಸಲಾಹುದ್ದೀನ್ ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಣೆ ಮಾಡಿತ್ತು. ಅಮೆರಿಕದ ಈ ಕ್ರಮವನ್ನು ಪಾಕಿಸ್ತಾನ ಸಂಪೂರ್ಣ ಅಸಮರ್ಥನೀಯ ಎಂದು ಹೇಳಿತ್ತು. ಅಲ್ಲದೆ, ಸ್ವಯಂ ಆಡಳಿತೆಯ ಕಾಶ್ಮೀರಿಗಳ ಹಕ್ಕನ್ನು ಬೆಂಬಲಿಸುವ ವ್ಯಕ್ತಿ ಸಲಾಹುದ್ದೀನ್ ಎಂದು ತಿಳಿಸಿತ್ತು.