ದೇಶ

ಮಸೀದಿಗಳನ್ನು ಎಲ್ಲಿ ಬೇಕಾದರು ಕಟ್ಟಬಹುದು, ಆದರೆ ದೇವಾಲಯವನ್ನಲ್ಲ: ಸುಬ್ರಮಣಿಯನ್ ಸ್ವಾಮಿ

Shilpa D
ನವದೆಹಲಿ: ರಾಮ ಮಂದಿರ ವಿವಾದದ ಬಗ್ಗೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು ತೀರ್ಪು ನಮ್ಮ ಪರವಾಗಿಯೇ ಬರಲಿದೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದರ ಜೊತೆಗೆ ಅಲ್ಲಿಯೇ ದೇವಾಲಯ ನಿರ್ಮಾಣ ಮಾಡಲು ಬಿಡುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಮಸೀದಿಗಳನ್ನು ಎಲ್ಲಿ ಬೇಕಾದರೂ ನಿರ್ಮಿಸಬಹುದು, ಆದರೆ ದೇವಾಲಯಗಳನ್ನೂ ನಾವು ಎಲ್ಲೆಂದರಲ್ಲಿ ಕಟ್ಟಲು ಸಾಧ್ಯವಿಲ್ಲ,ನಮಗೆ ಎಲ್ಲಾ ರೀತಿಯ ಹಕ್ಕಿದೆ, ಕೋರ್ಟ್ ತೀರ್ಪು ನಮ್ಮ ಪರವಾಗಿಯೇ ಬರುಲಿದೆ ಎಂದು ಸುದ್ದಿಸಂಸ್ಥೆಗೆ ಅವರು ತಿಳಿಸಿದ್ದಾರೆ.
ರಾಮ ಜನ್ಮಭೂಮಿ ವಿವಾದದ ಸಂಬಂಧ ಮಧ್ಯಪ್ರವೇಶಿಸುವಂತೆ ಕೋರಿ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.
ದೇವಾಲಯದಲ್ಲಿ ಪೂಜೆ ಮಾಡಲು ಅನುಮತಿ ನೀಡುವಂತೆ ಸ್ವಾಮಿ ಕೋರಿದ್ದರು, ಮಾರ್ಚ್ 31 ರಂದು ಸುಬ್ರಮಣಿಯನ್ ಸ್ವಾಮಿ ಅರ್ಜಿಯನ್ನು ತಿರಸ್ಕರಿಸಿದ್ದ ಕೋರ್ಟ್ ಅಯೋಧ್ಯೆ ವಿವಾದ ಸಂಬಂಧ ತುರ್ತು ಹಾಗೂ ತ್ವರಿತಗತಿ ವಿಚಾರಣೆ ನಡೆಸುವಂತೆ ಸೂಚಿಸಿತ್ತು.
ನಿಮ್ಮ ಅರ್ಜಿಯನ್ನು ವಿಚಾರಣೆ ಮಾಡಲು ಸಮಯ ಇಲ್ಲ ಎಂದು ಕೋರ್ಟ್ ಹೇಳಿತ್ತು. ನನಗೆ ಆಸ್ತಿಯ ಮಾಲೀಕತ್ವದ ಬಗ್ಗೆ ಆಸಕ್ತಿಯಿಲ್ಲ, ಆದರೇ ದೇವರ ವಿಚಾರದಲ್ಲಿ ನನಗೆ ಎಲ್ಲಾ ರೀತಿಯ ಮೂಲಭೂತ ಹಕ್ಕಿದೆ ಎಂದು ಸ್ವಾಮಿ ತಿಳಿಸಿದ್ದಾರೆ.
SCROLL FOR NEXT