ದೇಶ

ಉಪ ರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ

Lingaraj Badiger
ನವದೆಹಲಿ: ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಆಗಸ್ಟ್ 5ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಮಂಗಳವಾರ ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು ಇಂದಿನಿಂದಲೇ ನಾಮಪತ್ರ ಸಲ್ಲಿಸಬಹುದಾಗಿದೆ.
 ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಅಧಿಕಾರಾವಧಿ ಆಗಸ್ಟ್ 10ರಂದು ಅಂತ್ಯಗೊಳ್ಳಲಿದ್ದು, ಹೊಸ ಉಪ ರಾಷ್ಟ್ರಪತಿಗಳ ಆಯ್ಕೆಗೆ ಚುನಾವಣಾ ಆಯೋಗ ಆಗಸ್ಟ್ 5ಕ್ಕೆ ಚುನಾವಣೆ ನಿಗದಿಪಡಿಸಿದ್ದು, ಅಂದೇ ಫಲಿತಾಂಶ ಸಹ ಪ್ರಕಟಗೊಳ್ಳಲಿದೆ. 
ಉಪ ರಾಷ್ಟ್ರಪತಿ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಜುಲೈ 18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಉಪ ರಾಷ್ಟ್ರಪತಿ ಚುನಾವಣೆಗೆ ಆಡಳಿತರೂಢ ಎನ್ ಡಿಎ ಆಗಲಿ ಅಥವಾ ಪ್ರತಿಪಕ್ಷವಾಗಲಿ ಇನ್ನೂ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಲೋಕಸಭೆಯಲ್ಲಿ ಬಹುಮತವಿರುವ ಎನ್ ಡಿಎಗೆ ಎಐಎಡಿಎಂಕೆ ಹಾಗೂ ಬಿಜೆಡಿ ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದು, ಉಪ ರಾಷ್ಟ್ರಪತಿ ಚುನಾವಣೆಯಲ್ಲೂ ಬೆಂಬಲಿಸುವ ಸಾಧ್ಯತೆ ಇದೆ.
SCROLL FOR NEXT