ಕಾಂಗ್ರೆಸ್ ವಕ್ತಾರ ಅಜಯ್ ಮಕೇನ್ 
ದೇಶ

ಪ್ರಧಾನಿ ಮೋದಿ ವಿದೇಶ ಪ್ರವಾಸದಿಂದ ದೇಶಕ್ಕೆ ಪ್ರಯೋಜನವಾಗಿಲ್ಲ: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ಬಗ್ಗೆ ವಿಪಕ್ಷ ಕಾಂಗ್ರೆಸ್ ಟೀಕೆ ಮಾಡಿದ್ದು, ಪ್ರಧಾನಿ ವಿದೇಶ ಪ್ರವಾಸದಿಂದ ದೇಶಕ್ಕೆ ಪ್ರಯೋಜನವಾಗಿಲ್ಲ ಎಂದು ಹೇಳಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ಬಗ್ಗೆ ವಿಪಕ್ಷ ಕಾಂಗ್ರೆಸ್ ಟೀಕೆ ಮಾಡಿದ್ದು, ಪ್ರಧಾನಿ ವಿದೇಶ ಪ್ರವಾಸದಿಂದ ದೇಶಕ್ಕೆ ಪ್ರಯೋಜನವಾಗಿಲ್ಲ ಎಂದು ಹೇಳಿದೆ. 
ಈ ವರೆಗೂ ಪ್ರಧಾನಿ ಮೋದಿ ಕೈಗೊಂಡ ವಿದೇಶ ಪ್ರವಾಸಗಳಿಂದ ಭಾರತಕ್ಕೆ ಒಂದಿಷ್ಟೂ ಪ್ರಯೋಜನವಾಗಿಲ್ಲ, ಈಗ ಇಸ್ರೇಲ್ ಪ್ರವಾಸ ಕೈಗೊಳ್ಳುತ್ತಿದ್ದು, ಅದರಿಂದ ಉಂಟಾಗಲಿರುವ ಪ್ರಯೋಜನವನ್ನು ಕಾಲವೇ ತಿಳಿಸಲಿದೆ ಎಂದು ಕಾಂಗ್ರೆಸ್ ವಕ್ತಾರ ಅಜಯ್ ಮಕೇನ್ ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರವಾಸ ಕೈಗೊಂಡಿರುವ ಬೆನ್ನಲ್ಲೇ ಕಾಂಗ್ರೆಸ್ ಈ ಹೇಳಿಕೆ ನೀಡಿದೆ. ಕಳೆದ 3 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 64 ಬಾರಿ ಕೈಗೊಂಡಿರುವ ವಿದೇಶ ಪ್ರವಾಸಗಳು ಕೇವಲ ಮೋದಿ ಭಾಷಣವನ್ನು ಕೇಳುವ ದೇಶದಲ್ಲಿರುವ ವೀಕ್ಷಕರನ್ನಷ್ಟೇ ಹೆಚ್ಚುಮಾಡಿದೆ. ಆದರೆ ಅದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಜಯ್ ಮಕೇನ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್