ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ 
ದೇಶ

ಗಡಿ ವಿವಾದ ನಡುವೆಯೇ ಜರ್ಮನಿ ಜಿ20 ಶೃಂಗಸಭೆಯಲ್ಲಿ ಮೋದಿ ಮತ್ತು ಕ್ಸಿ ಜಿನ್‌ಪಿಂಗ್‌ ಮುಖಾಮುಖಿ

ಭಾರತ ಮತ್ತು ಚೀನಾ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ನಡುವೆಯೇ ಜುಲೈ.7ರಂದು ಜರ್ಮನಿಯ ಹ್ಯಾಮ್ ಬರ್ಗ್ ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್'ಪಿಂಗ್...

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ನಡುವೆಯೇ ಜುಲೈ.7ರಂದು ಜರ್ಮನಿಯ ಹ್ಯಾಮ್ ಬರ್ಗ್ ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್'ಪಿಂಗ್ ಅವರು ಮುಖಾಮುಖಿಯಾಗಲಿದ್ದಾರೆ.
ಜರ್ಮಿಯ ಹ್ಯಾಮ್ ಬರ್ಗ್ ನಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು, ಶೃಂಗಸಭೆಗೂ ಮುನ್ನ ಭಾರತ, ಬ್ರಿಜೆಲ್, ರಷ್ಯಾ, ಚೀನಾ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರಗಳ ನಾಯಕರು ಅನೌಪಚಾರಿಕ ಮಾತುಕತೆಗಳನ್ನು ನಡೆಸಲಿದ್ದಾರೆಂದು ಎಂದು ತಿಳಿದುಬಂದಿದೆ. 
ಭಾರತ-ಚೀನಾ ಗಡಿಯಲ್ಲಿ ಈಗಾಗಲೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಉಭಯ ದೇಶಗಳ ನಡುವೆ ವಾಕ್ಸಮರ ಮುಂದುವರೆದಿದೆ. ಇದರ ಬೆನ್ನಲ್ಲೇ ಶುಕ್ರವಾರ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಮೋದಿ ಹಾಗೂ ಜಿನ್ ಪಿಂಗ್ ಮುಖಾಮುಖಿಯಾಗುತ್ತಿದ್ದು, ಅಂದು ಇಬ್ಬರು ನಾಯಕರು ಸಿಕ್ಕಿಂ ಗಡಿ ವಿಚಾರದ ಕುರಿತು ಚರ್ಚೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಉಭಯ ರಾಷ್ಟ್ರಗಳಲ್ಲಿ ಕುತೂಹಲ ಹೆಚ್ಚಾಗುವಂತೆ ಮಾಡಿದೆ. 
ಸಿಕ್ಕಿಂ ವಲಯದಲ್ಲಿ ರಸ್ತೆ ನಿರ್ಮಿಸಲು ಚೀನಾ ಮುಂದಾಗಿತ್ತು. ಇದೊಂದು ಅಭಿವೃದ್ಧಿ ಕಾರ್ಯ ಎಂದು ಚೀನಾ ಹೇಳಿದೆ. ಆದರೂ ರಸ್ತೆ ನಿರ್ಮಾಣದ ಹೆಸರಿನಲ್ಲಿ ಭಾರತದ ಭೂಭಾಗವನ್ನು ಕಬಳಿಸುವ ಉದ್ದೇಶ ಇರುವುದರಿಂದ ಭಾರತ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್

ಟಿವಿ, ಒಟಿಟಿಗೆ ಬರುತ್ತಾ 'ಪ್ರೇಮದ ಊರಲಿ'? ಚಿತ್ರತಂಡ ಹೇಳಿದ್ದೇನು?

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!