ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬರ್ತ್ ಡೇ ಪಾರ್ಟಿಗೆ ಬಂದ ವಿದ್ಯಾರ್ಥಿನಿ ಮೇಲೆ ನಾಲ್ವರು ಕ್ಲಾಸ್ ಮೇಟ್ ಗಳಿಂದ ಅತ್ಯಾಚಾರ ಆರೋಪ

ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಂದ 17 ವರ್ಷದ ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ...

ಸಾಂದರ್ಭಿಕ ಚಿತ್ರ
Shilpa D
Updated On : 4 Jul 2017, 1:43 am
ಹೈದರಾಬಾದ್: ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಂದ  17 ವರ್ಷದ ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ಖಮ್ಮಂನಲ್ಲಿ ನಡೆದಿದೆ.
ಆರೋಪಿಗಳು ಘಟನೆಯನ್ನು ಸಂಪೂರ್ಣವಾಗಿ ಚಿತ್ರೀಕರಿಸಿ, ಯಾರಿಗೂ ತಿಳಿಸಿದಂತೆ ಆಕೆಗೆ ಬೆದರಿಕೆ ಒಡ್ಡಿದ್ದಾರೆ.
ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಸ್ನೇಹಿತರೊಬ್ಬರ ಬರ್ತ್‌‌ಡೇ ಪಾರ್ಟಿಗೆ ಅವರ ಮನೆಗೆ ತೆರಳಿದ್ದಳು. ಈ ವೇಳೆ ಆಕೆಯ ನಾಲ್ಕು ಜನ ಕ್ಲಾಸ್‌ಮೆಂಟ್‌ಗಳೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. 

Advertisement

Advertisement

ಈ ಸಂಬಂಧ ವಿದ್ಯಾರ್ಥಿನಿ ಇಲ್ಲಿನ ಖಮ್ಮಂ III ಟೌನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಅತ್ಯಾಚಾರವನ್ನು ಆರೋಪಿಗಳು ಚಿತ್ರೀಕರಿಸಿದ್ದಾರೆ ಹಾಗೂ ಈ ಕೃತ್ಯದ ಬಗ್ಗೆ ಎಲ್ಲೂ ಬಾಯ್ಬಿಡದಂತೆ ಬೆದರಿಕೆಯೊಡ್ಡಿದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. 
ವಿದ್ಯಾರ್ಥಿನಿಯ ದೂರನ್ನು ಆಧರಿಸಿ ಪೊಲೀಸರು ಗ್ಯಾಂಗ್‌ರೇಪ್ ಹಾಗೂ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement