ದೇಶ

ಫೇಸ್'ಬುಕ್'ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಪಶ್ಚಿಮ ಬಂಗಾಳದಲ್ಲಿ ಕೋಮು ಸಂಘರ್ಷ

Manjula VN
ಕೋಲ್ಕತಾ; ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ಪ್ರಕಟಿಸಿದ ಕಾರಣಕ್ಕಾಗಿ ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯಲ್ಲಿ ಕೋಮು ಗಲಭೆಗಳು ಭುಗಿಲೆದ್ದಿವೆ. 
ಕೆಲ ದಿನಗಳ ಹಿಂದಷ್ಟೇ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ವೊಂದನ್ನು ಹಾಕಿದ್ದಾನೆ. ಯುವಕ ಹಾಕಿದ್ದ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದವು, ಹಲವು ಇದಕ್ಕೆ ವಿರೋಧಗಳನ್ನು ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು ಯುವಕನನ್ನು ಬಂಧನಕ್ಕೊಳಪಡಿಸಿದ್ದರು. 
ಇದೀಗ ಬೆಳವಣೆಗೆ ಪಶ್ಚಿಮ ಬಂಗಾಳದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳದಲ ಹಲವೆಡೆ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು 400 ಬಿಎಸ್ಎಫ್ ಯೋಧರನ್ನು ನಿಯೋಜಿಸಿದೆ. 
ಈ ನಡುವೆ ರಾಜಕೀಯ ಕೆಸರೆರಚಾಟ ಕೂಡ ಆರಂಭವಾಗಿದ್ದು, 2000ಕ್ಕೂ ಹೆಚ್ಚು ಮುಸ್ಲಿಮರು ಹಿಂದೂಗಳ ಕುಟುಂಬದ ಮೇಲೆ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು ಆರೋಪಿಸಿದ್ದಾರೆ. ಈ ಮಧ್ಯೆ ಈ ಘಟನೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲರ ನಡುವೆ ವಾಕ್ಸಮರಕ್ಕೂ ನಾಂದಿ ಹಾಡಿದೆ. 
SCROLL FOR NEXT