ಇಸ್ರೇಲ್: ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಇಸ್ರೇಲ್ ಗೆ ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ. ಮೋದಿಗೆ ವಿಶೇಷ ಗೌರವ ಸೂಚಿಸುವುದಕ್ಕಾಗಿ ಹಾಗೂ ಇಸ್ರೇಲ್ ಗೆ ಭಾರತದ ಪ್ರಧಾನಿಯ ಮೊದಲ ಭೇಟಿಯ ನೆನಪಿಗಾಗಿ ಇಸ್ರೇಲ್ ನಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಹೂವಿನ ಪ್ರಬೇಧಕ್ಕೆ ಪ್ರಧಾನಿ ಮೋದಿ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ.
ಇಸ್ರೇಲ್ ನ ಕ್ರಿಸಾಂತುಮನ್ ಹೂವಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಇಸ್ರೇಲ್ ನ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಬಗ್ಗೆ ಇಸ್ರೇಲ್ ನ ಸರ್ಕಾರ ಟ್ವೀಟ್ ಮಾಡಿದ್ದು, ಪ್ರಧಾನಿ ಭೇಟಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಹೂವಿಗೆ ಮೋದಿ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತದೆ, ನಿಜವಾಗಿಯೂ ಬೆಳೆಯುತ್ತಿರುವ ಪಾಲುದಾರಿಕೆ! ಎಂದು ಹೇಳಿದೆ.
ಇಸ್ರೇಲ್ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಡಾನ್ಜಿಗರ್ "ಡಾನ್ ಫ್ಲವರ್ ಫಾರ್ಮ್ ಗೆ ಇಸ್ರೇಲ್ ಪ್ರಧಾನಿ ನೇತನ್ಯಾಹು ಅವರೊಂದಿಗೆ ಭೇಟಿ ನೀಡಿದ್ದರು.