ಚುನಾವಣಾ ಆಯೋಗ 
ದೇಶ

ಚುನಾವಣಾ ಆಯುಕ್ತರ ನೇಮಕ ಪಾರದರ್ಶಕವಾಗಿರಲು ಕಾನೂನು ಜಾರಿಗೊಳಿಸಿ: ಕೇಂದ್ರಕ್ಕೆ ಸುಪ್ರೀಂ

ಮುಖ್ಯ ಚುನಾವಣಾ ಆಯುಕ್ತರ ನೇಮಕದಲ್ಲಿ ಪಾರದರ್ಶಕತೆ ಕಾಪಾಡಲು ಹಾಗೂ ಸೂಕ್ತ ವಿಧಾನಗಳನ್ನು ಜಾರಿಗೊಳಿಸಲು ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ ನೇಮಕದಲ್ಲಿ ಪಾರದರ್ಶಕತೆ ಕಾಪಾಡಲು ಹಾಗೂ ಸೂಕ್ತ ವಿಧಾನಗಳನ್ನು ಜಾರಿಗೊಳಿಸಲು ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 
ಈ ವರೆಗೂ ಚುನಾವಣಾ ಆಯೋಗದಲ್ಲಿ ಅತ್ಯುತ್ತಮವಾದವರೇ ಕಾರ್ಯನಿರ್ವಹಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆಯಾದರೂ, ಆಯೋಗದ ಆಯುಕ್ತರನ್ನು ನೇಮಕ ಮಾಡುವಾಗ ಸೂಕ್ತ ವಿಧಾನಗಳನ್ನು ಅನುಸರಿಸಿ ಪಾರದರ್ಶಕತೆ ಕಾಯ್ದುಕೊಳ್ಳಲು ಕಾನೂನು ರೂಪಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ. 
ಮುಖ್ಯ ನ್ಯಾ.ಜೆಎಸ್ ಖೇಹರ್ ಹಾಗೂ ಡಿವೈ ಚಂದ್ರಚೂಡ್ ಇದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದ್ದು, ಸಂವಿಧಾನದ ಪರಿಚ್ಛೇಧ 324 ರ ಪ್ರಕಾರ ಕಾನೂನಿನ ಅಡಿಯಲ್ಲಿ ಮುಖ್ಯಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರ ನೇಮಕ ನಡೆಯಲು ಅವಕಾಶ ನೀಡುತ್ತದೆ. ಆದರೆ ಈ ವರೆಗೂ ಇದಕ್ಕೆ ಸಂಬಂಧಿಸಿದಂತೆ ಕಾನೂನನ್ನೇ ಜಾರಿಗೊಳಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ. 
ಸಂಸತ್ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಕಾನೂನು ರೂಪಿಸುತ್ತದೆ ಎಂಬ ವಿಶ್ವಾಸವಿದೆ. ಒಂದು ವೇಳೆ ರೂಪಿಸದೇ ಇದ್ದಲ್ಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ನೀಡಬೇಕಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಹೇಳಿದ್ದಾರೆ. 
ಸಿಇಸಿ ಯಲ್ಲಿ ಪಾರದರ್ಶಕವಾಗಿ ಚುನಾವಣಾ ಆಯುಕ್ತರ ನೇಮಕ ಮಾಡಲು ಸೂಚನೆ ನೀಡಬೇಕೆಂದು ಮನವಿ ಮಾಡಿದ್ದ ಪಿಐಎಲ್ ನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!