ಬುಜ್ನೊರ್(ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಿಜ್ನೊರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 74ರಲ್ಲಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ತನಿಖೆ ಮುಂದುವರಿದಿದೆ. ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.