ರಾಷ್ಟ್ರೀಯ ಜನತಾ ದಳದ ಮುಖಂಡ ಲಾಲೂ ಪ್ರಸಾದ್ ಯಾದವ್ 
ದೇಶ

ಸಿಬಿಐ ದಾಳಿ ರಾಜಕೀಯ ಪಿತೂರಿಯಾಗಿದ್ದು, ತಂತ್ರಗಳಿಂದ ನಾನು ಕುಗ್ಗುವುದಿಲ್ಲ: ಲಾಲೂ ಪ್ರಸಾದ್ ಯಾದವ್

ಸಿಬಿಐ ದಾಳಿಯೊಂದು ರಾಜಕೀಯ ಪಿತೂರಿಯಾಗಿದ್ದು, ದಾಳಿಯಿಂದ ನಾನು ಕುಗ್ಗುವುದಿಲ್ಲ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ಲಾಲೂ ಪ್ರಸಾದ್ ಯಾದವ್ ಅವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ; ಸಿಬಿಐ ದಾಳಿಯೊಂದು ರಾಜಕೀಯ ಪಿತೂರಿಯಾಗಿದ್ದು, ದಾಳಿಯಿಂದ ನಾನು ಕುಗ್ಗುವುದಿಲ್ಲ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ಲಾಲೂ ಪ್ರಸಾದ್ ಯಾದವ್ ಅವರು ಶುಕ್ರವಾರ ಹೇಳಿದ್ದಾರೆ. 
ಹೋಟೆಲ್ ಗುತ್ತಿಗೆ ಅಕ್ರಮ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ದಾಳಿ ಮಾಡಿರುವ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಲಾಲೂ ಅವರು, ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ದ ತೀವ್ರವಾಗಿ ಕಿಡಿಕಾರಿದ್ದಾರೆ. 
ಸಿಬಿಐ ದಾಳಿಯೊಂದು ಪಿತೂರಿಯಾಗಿದ್ದು, ಈ ತಂತ್ರಗಳಿಗೆ ನಾನಾಗಲೀ ಅಥವಾ ನನ್ನ ಪಕ್ಷವಾಗಲೀ ಕುಗ್ಗುವುದಿಲ್ಲ. ಎಲ್ಲವನ್ನು ವ್ಯವಸ್ಥೆಯಂತೆಯೇ ಮಾಡಲಾಗಿದೆ, ನಾನು ಯಾವುದೇ ತಪ್ಪನ್ನೂ ಮಾಡಿಲ್ಲ ಎಂದು ಹೇಳಿದ್ದಾರೆ. 
ಸಿಬಿಐ ದಾಳಿ ಎಂದರೇನು ಎಂಬುದೂ ಯಾರಿಗೂ ತಿಳಿದಿರಲಿಲ್ಲ. ಮೋದಿಗೆ ನಿರ್ಗಮನ ಬಾಗಿಲು ತೋರಿಸುವುದಕ್ಕೆ ನಾವು ತಯಾರಿ ನಡೆಸುತ್ತಿದ್ದೇವೆ. ನನ್ನ ಮೇಲೆ ಮತ್ತು ನನ್ನ ಮಕ್ಕಳ ಮೇಲೆ ರಾಜಕೀಯ ಹಗೆತನ ಸಾಧಿಸಲಾಗುತ್ತಿದ್ದು, ಈ ಸತ್ಯವನ್ನು ರ್ಯಾಲಿಗಳ ಮೂಲಕ ಜನರಿಗೆ ತಿಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!