ದೇಶ

ಪಶ್ಚಿಮ ಬಂಗಾಳ: ರಾಷ್ಟ್ರಪತಿ ಆಡಳಿತ ಹೇರಲು ರಾಜ್ಯಪಾಲರಿಗೆ ಬಿಜೆಪಿ ಆಗ್ರಹ

Srinivas Rao BV
ಕೋಲ್ಕತ್ತಾ: ಪಶ್ಚಿಮ ಬಂಗಾಳ ಬಿಜೆಪಿ ಅಲ್ಲಿನ ರಾಜ್ಯಪಾಲ ಕೆಎನ್ ತ್ರಿಪಾಠಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿದೆ. 
ರಾಜ್ಯದಲ್ಲಿ ಕೋಮುಗಲಭೆ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಬೇಕು ಎಂದು ಬಿಜೆಪಿ ನಾಯಕರು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹದಗೆಡಲು ರಾಷ್ಟ್ರವಿರೋಧಿಗಳೊಂದಿಗೆ ರಾಜ್ಯ ಸರ್ಕಾರ ಕೈ ಜೋಡಿಸಿರುವುದೇ ಕಾರಣ ಎಂದು ಬಿಜೆಪಿ ಆರೋಪಿಸಿದೆ. 
ಪಶ್ಚಿಮ ಬಂಗಾಳದಲ್ಲಿ ಕೋಮುಗಲಭೆ ಸೃಷ್ಟಿಯಾಗಿರುವುದು ಹಾಗೂ ಡಾರ್ಜ್ಲಿಂಗ್ ಹಿಲ್ಸ್ ನಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.
SCROLL FOR NEXT