ಸಂಗ್ರಹ ಚಿತ್ರ 
ದೇಶ

ಛತ್ತೀಸ್ಗಢ: 7 ನಕ್ಸಲರನ್ನು ಬಂಧನಕ್ಕೊಳಪಡಿಸಿದ ಪೊಲೀಸರು

ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ 7 ನಕ್ಸಲರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ...

ರಾಯ್ಪುರ: ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ 7 ನಕ್ಸಲರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. 
ಕಟೆಕಲ್ಯಾಣ್ ಪೊಲೀಸ್ ಠಾಣಾ ನಿಯಂತ್ರಣದಲ್ಲಿರುವ ಬರುವ ಮುಂಗಾ ಗ್ರಾಮದಲ್ಲಿರುವ ಅರಣ್ಯ ಪ್ರದೇಶದಲ್ಲಿರುವ ನಾಲ್ವರು ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿತ್ತು. ಮೂವರು ನಕ್ಸಲರನ್ನು ಕೌಕೊಂಡಾ ಪೊಲೀಸ್ ಠಾಣಾ ನಿಯಂತ್ರಣದ ಪ್ರದೇಶದಲ್ಲಿ ಬಂಧನಕ್ಕೊಳಪಡಿಸಲಾಯಿತು ಎಂದು ದಂಡೇವಾಡ ಜಿಲ್ಲೆಯ ಪೊಲೀಸ್ ಅಧಿಕಾರಿ ಕಮಲೋಚಾನ್ ಕಶ್ಯಪ್ ಅವರು ಹೇಳಿದ್ದಾರೆ. 
ಕಟೆಕಲ್ಯಾಣ್ ಪ್ರದೇಶದಲ್ಲಿ ನಕ್ಸಲರು ಬೀಡಿಬಿಟ್ಟಿರುವುದಾಗಿ ಖಚಿತ ಮಾಹಿತಿ ಲಭ್ಯವಾಗಿತ್ತು. ಇದರಂತೆ ಜಿಲ್ಲಾ ಮೀಸಲಾತಿ ತಂಡ, ದಂತೇವಾಡ, ಸುಕ್ಮಾ ಮತ್ತು ಬಸ್ತಾರ್ ನ ವಿಶೇಷ ಕಾರ್ಯಾಚರಣೆ ಪಡೆ, ಸಿಆರ್ ಪಿಎಫ್ ಯೋಧರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದೆವು. 
ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ನಕ್ಸಲರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಸ್ಥಳದಿಂದ ಪರಾರಿಯಾಗಲು ನಕ್ಸಲರು ಯತ್ನಿಸಿದಾಗ ನಕ್ಸಲರನ್ನು ಸುತ್ತುವರೆದ ಭದ್ರತಾ ಪಡೆಗಳು ಬಂಧನಕ್ಕೊಳಪಡಿಸಿದರು. 
ಬಂಧಿತ ನಕ್ಸಲರನ್ನು ಕವಾಸಿ ಬುಧ್ರಾಮ್ (30), ಆಯ್ತು ಕವಾಸಿ (32), ಮುಯಾಯಾ ಕವಾಸಿ (22) ಮತ್ತು ಹದ್ಮಾ ಕೊವಾಸಿ (30), ಚೈತೆ ಪೊದ್ಯಾಮಿ (24), ಹಿದ್ಮಾ ಮುಚಾಕಿ (25), ಭೀಮಾ ಕಡ್ತಾಮಿ (31) ಎಂದು ಗುರ್ತಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!