ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡಿರುವ ಜೆಡಿಯು ರಾಷ್ಟ್ರಾಧ್ಯಕ್ಷ, ಬಿಹಾರ ಸಿಎಂ ನಿತೀಶ್ ಕುಮಾರ್ ಉಪರಾಷ್ಟ್ರಪತಿ ಚುನಾವಣೆಯಲ್ಲಿಯೂ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡುವ ಸಾಧ್ಯತೆಗಳು ಹೆಚ್ಚಿದೆ.
ಇದಕ್ಕೆ ಪೂರಕವೆಂಬಂತೆ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ನಡೆಸುತ್ತಿರುವ ಸಭೆಗೆ ನಿತೀಶ್ ಕುಮಾರ್ ಗೈರು ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ವರದಿಗಳ ಪ್ರಕಾರ ನಿತೀಶ್ ಕುಮಾರ್ ವೈರಾಣು ಸೋಂಕಿನಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಯುಪಿಎ ಸಭೆ ನಡೆಸಿದ್ದಾಗಲೂ ನಿತೀಶ್ ಕುಮಾರ್ ಇದೇ ಮಾದರಿಯಲ್ಲಿ ಗೈರು ಹಾಜರಾಗಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos