ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಗಡಿ ಗ್ರಾಮಗಳ ಮೇಲೆ ಶೆಲ್ ಗಳ ದಾಳಿ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ.
ಗಡಿ ನಿಯಂತ್ರಣ ರೇಖೆ ಬಳಿ ನಾಗರಿಕರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ದಾಳಿ ನಡೆಸುತ್ತಿರುವ ಪಾಕಿಸ್ತಾನ ಸೇನೆ, ಗ್ರಾಮಗಳ ಮೇಲೆ ಶೆಲ್ ಹಾಗೂ ಆಟೋಮೆಟಿಕ್ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ದಾಳಿ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಖಾದಿ, ಕರ್ಮಾರ ಮತ್ತು ಡಿವ್ಗರ್ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನದ ಸೈನಿಕರು ದಾಳಿ ನಡೆಸುತ್ತಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂಂಚ್ ಜಿಲ್ಲೆಯಲ್ಲಿರುವ ಭಾರತೀಯ ಸೇನಾ ನೆಲೆಗಳ ಬಳಿಯಿರುವ ಗ್ರಾಮಗಳ ಮೇಲೆ ಪಾಕಿಸ್ತಾನ ಮಾರ್ಟರ್ ಶೆಲ್ ಗಳು, ಆಟೋಮೆಟಿಕ್ ಶಸ್ತ್ರಾಗಳು ಹಾಗೂ ಸಣ್ಣ ಶಸ್ತ್ರಾಸ್ತ್ರಗಳ ಮೂಲಕ ದಾಳಿ ನಡೆಸುತ್ತಿದೆ. ದಾಳಿಯಲ್ಲಿ ಈ ವರೆಗೂ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ನಿನ್ನೆ ಕೂಡ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿತ್ತು. ಪಾಕಿಸ್ತಾನದ 3 ಬಂಕರ್ ಗಳನ್ನು ನಾಶಪಡಿಸಿತ್ತು. ಪ್ರತಿ ದಾಳಿ ವೇಳೆ ಪಾಕಿಸ್ತಾನದ ಇಬ್ಬರು ಸೈನಿಕರು ಸಾವನ್ನಪ್ಪಿ ಹಲವರಿಗೆ ಗಾಯಗಳಾಗಿರುವುದಾಗಿ ವರದಿಗಳು ತಿಳಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics