ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ 3-4 ಕಡೆಗಳಲ್ಲಿ ಭಯೋತ್ಪಾದಕರ ದಾಳಿ ನಡೆದಿದ್ದು, 6 ಯಾತ್ರಾರ್ಥಿಗಳು ಮೃತಪಟ್ಟಿದ್ದರೆ, 12 ಯಾತ್ರಿಗಳು ಗಾಯಗೊಂಡಿದ್ದಾರೆ.
ಬ್ಯಾಟೆಂಗೂ ಹಾಗೂ ಖಾನಾಬಾಲ್ ಗಳಲ್ಲಿ ಶಸ್ತ್ರಸಜ್ಜಿದ ಭಯೋತ್ಪಾದಕರ ಗುಂಪು ಪೊಲೀಸ್ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಸಿಲುಕಿದ್ದು 6 ಯಾತ್ರಿಗಳು ಭಯೋತ್ಪಾದಕರ ದಾಳಿಗೆ ಗುರಿಯಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ಮುನೀರ್ ಖಾನ್ ತಿಳಿಸಿದ್ದಾರೆ.
ಇಬ್ಬರು ಯಾತ್ರಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನು 4 ಜನರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗದ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಮಾಹಿತಿ ಪಡೆದ ಗೃಹ ಸಚಿವ ರಾಜನಾಥ್ ಸಿಂಗ್, ಭದ್ರತೆ ಹೆಚ್ಚಿಸುವಂತೆ ಸೂಚನೆ
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರ ಮೇಲೆ ಭಯೋತ್ಪಾದಕರ ದಾಳಿ ನಡೆದಿರುವುದರ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಾಜ್ಯಪಾಲರಿಂದ ಮಾಹಿತಿ ಪಡೆದಿದ್ದಾರೆ. ಭಯೋತ್ಪಾದಕರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರಿಗಳಿಗೆ ಭದ್ರತೆಯನ್ನು ಹೆಚ್ಚಿಸುವಂತೆ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ.
ಉಗ್ರರಿಗಾಗಿ ಶೋಧ, ಎನ್ ಎಸ್ ಜಿ ಅಜಿತ್ ದೋವೆಲ್ ನೇತೃತ್ವದಲ್ಲಿ ತುರ್ತು ಸಭೆ
ಅಮರನಾಥ್ ಯಾತ್ರಿಕರ ಮೇಲೆ ಭಯೋತ್ಪಾದಕರ ದಾಳಿ ನಡೆಯುತ್ತಿದ್ದಂತೆಯೇ ಉಗ್ರರನ್ನು ಸೆದೆಬಡಿಯಲು ಯೋಧರು ಹುಡುಕುತ್ತಿದ್ದಾರೆ. ಇದೇ ವೇಳೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇತೃತ್ವದಲ್ಲಿ ತುರ್ತು ಸಭೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics