ದೇಶ

ಪ್ರತಿಪಕ್ಷಗಳಿಂದ ಇಂದು ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಣೆ ಸಾಧ್ಯತೆ

Srinivas Rao BV
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಜು.11 ರಂದು ಎನ್ ಡಿಎ ಪಕ್ಷಗಳ ಹೊರತಾಗಿರುವ ಪಕ್ಷಗಳು ಸಭೆ ನಡೆಸಲಿದ್ದು, ಇಂದೇ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನೂ ಆಯ್ಕೆ ಮಾಡುವ ಸಾಧ್ಯತೆಗಳಿವೆ. 
ಬಿಹಾರದ ಮೈತ್ರಿ ಕೂಟದಲ್ಲಿ ಗುರುತಿಸಿಕೊಂಡಿರುವ ನಿತೀಶ್ ಕುಮಾರ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯಲಿರುವ ಸಭೆಗೆ ಗೈರಾಗಲಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಗೆ ಹಿನ್ನಡೆಯುಂಟಾಗಿದೆ. ಪ್ರತಿಪಕ್ಷಗಳು ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಂಬಂಧ ಸಭೆ ನಡೆಸಿದರೆ ಇತ್ತ ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ಶಾಸಕರ ಸಭೆ ನಡೆಸಲಿದ್ದಾರೆ. ಆದರೆ ಕೆಸಿ ತ್ಯಾಗಿ ಹಾಗೂ ಶರದ್ ಯಾದವ್ ಪ್ರತಿಪಕ್ಷಗಳ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಉಪರಾಷ್ಟ್ರಪತಿ ಹುದ್ದೆಗೆ ದಲಿತ ಮುಖಂಡ ಪ್ರಕಾಶ್ ಅಂಬೇಡ್ಕರ್ ಅವರ ಹೆಸರು ಯುಪಿಎ ಮೈತ್ರಿಕೂಟದಿಂದ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರತಿಪಕ್ಷಗಳ ಮತ್ತೊಂದು ಗುಂಪು ಪಶ್ಚಿಮ ಬಂಗಾಳದ ರಾಜ್ಯಪಾಲ ಗೋಪಾಲ್ ಕೃಷ್ಣ ಗಾಂಧಿ ಅವರ ಹೆಸರನ್ನು ಸೂಚಿಸಿದೆ. 
SCROLL FOR NEXT