ಪಂಚ ಸದಸ್ಯ ಪೀಠದಿಂದ ಜುಲೈ 18 ಮತ್ತು 19 ರಂದು ಆಧಾರ್ ಕುರಿತ ಅರ್ಜಿಗಳ ವಿಚಾರಣೆ
ಗೌಪ್ಯತೆಯ ಹಕ್ಕು ಸೇರಿದಂತೆ ಆಧಾರ್ ಗೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ಜು.18-19 ರಂದು ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನವದೆಹಲಿ: ಗೌಪ್ಯತೆಯ ಹಕ್ಕು ಸೇರಿದಂತೆ ಆಧಾರ್ ಗೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ಜು.18-19 ರಂದು ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಆಧಾರ್ ಗೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ಜು.18-19 ರಂದು ವಿಚಾರಣೆ ನಡೆಸಲಿದೆ ಎಂದು ನ್ಯಾ.ಜೆಎಸ್ ಖೇಹರ್, ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ. ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಹಾಗೂ ಆಧಾರ್ ನ್ನು ವಿವಿಧ ಯೋಜನೆಗಳಿಗೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿರುವ ಅರ್ಜಿದಾರರ ಪರ ವಕೀಲ ಅಡ್ವೊಕೇಟ್ ಶ್ಯಾಮ್ ದಿವಾನ್ ಅರ್ಜಿಗಳ ಶೀಘ್ರ ವಿಚಾರಣೆಗೆ ಮನವಿ ಮಾಡಿದ್ದರು.
7 ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಬೇಕೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಆಟಾರ್ನಿ ಜನರಲ್ ಹಾಗೂ ದಿವಾನ್ ಪಂಚ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿ ಎಂಬ ಪ್ರತಿಕ್ರಿಯೆ ನೀಡಿದ್ದು ಪಂಚ ಸದಸ್ಯ ಪೀಠದಿಂದ ಜು.18-19 ರಂದು ಆಧಾರ್ ಕುರಿತ ಅರ್ಜಿಗಳ ವಿಚಾರಣೆ ನಡೆಯಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.